ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿದ ಅನೇಕ ಮಹಿನೀಯರಲ್ಲಿ ಬಾಬು ಜಗಜೀವನ ರಾಮ್ ಕೂಡ ಒಬ್ಬರಾಗಿದ್ದಾರೆಂದು ತಹಸೀಲ್ದಾರ್ ಎಸ್.ಅಶ್ವಿನಿ ಹೇಳಿದರು.
ಅವರು ಭಾನುವಾರ ಪಟ್ಟಣದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ್ ಸಭಾಂಗಣದಲ್ಲಿ ತಾಲೂಕು ಆಡಳಿತ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಬಾಬು ಜಗಜೀವನ ರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 05-04-1908ರಲ್ಲಿ ಜನಿಸಿದ ಬಾಬು ಜಗಜೀವನ ರಾಮ್ ಅವರು ತಮ್ಮ ಜೀವನವನ್ನೇ ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದರು. ಅವರು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದರೆಂದು ಹೇಳಿದರು.
ಬಾಲಕೀಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸವಿತಾ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಸ್ವ್ವಾತಂತ್ರ್ಯದ ಬಳಿಕ ಅನೇಕ ಮಹತ್ವದ ಹುದ್ದೆಗಳನ್ನು ನಿರ್ವಹಿಸುವ ಜತೆಗೆ ಕೃಷಿ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರವಾಗಿದೆ. ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾಜದಲ್ಲಿ ಸಮಾನತೆ ತರಲು ಹೋರಾಡಿದರು. ಅವರ ಆದರ್ಶ ಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸೋಣವೆಂದು ಕರೆ ನೀಡಿದರು.
ಬಗರ್ ಹುಕುಂ ಸಮಿತಿ ಸದಸ್ಯ ಹರೀಶ್ ಸಬ್ಬೇನಹಳ್ಳಿ, ಡಿಎಸ್‍ಎಸ್ ಜಿಲ್ಲಾಧ್ಯಕ್ಷ ಸುಂದ್ರೇಶ್ ಹೊಯ್ಸಳಲು, ಬೆಳೆಗಾರರ ಸಂಘದ ಅಧ್ಯಕ್ಷ .ಭಾಲಕೃಷ್ಣ,ಸಮಾಜ ಕಲ್ಯಾಣಾಧಿಕಾರಿ ಸೋಮಶೇಖರ್, ಸೀತಮ್ಮ ಮತ್ತಿತರರಿದ್ದರು.



