kerala girl

 

 

ಚಿಕ್ಕಮಗಳೂರು ಮುಳ್ಳಯ್ಯನಗಿರಿ, ದತ್ತಪೀಠ ಪ್ರದೇಶಕ್ಕೆ ಕುಟುಂಬದ ಜೊತೆ ಪ್ರವಾಸ ಬಂದಿದ್ದ  ಕೇರಳ ಮೂಲದ 15 ವರ್ಷದ ಬಾಲಕಿ ಇದ್ದಕ್ಕಿದ್ದಂತೆ  ಕಾಣೆಯಾಗಿದ್ದು, ಎರಡು ದಿನ ಕಳೆದರೂ ಬಾಲಕಿಯ ಸುಳಿವು ಸಿಕ್ಕಿಲ್ಲ.

ಕೇರಳದ  ಪಾಲಕ್ಕಾಡ್ ಜಿಲ್ಲೆಯ ಶ್ರೀನಂದ (15) ನಾಪತ್ತೆಯಾದ ಬಾಲಕಿ. ಶಾಲೆಗೆ ರಜೆ ಸಲುವಾಗಿ ಕುಟುಂಬಸ್ಥರ ಸಮೇತ ಕರ್ನಾಟಕದ ಪ್ರವಾಸಕ್ಕೆ ಬಂದಿದ್ದಳು. ಉತ್ತರ ಕರ್ನಾಟಕ ಸುತ್ತಿ ದಕ್ಷಿಣ ಕಾರ್ನಾಟಕದ ಕಾಫಿನಾಡಿಗೆ ಬಂದಿದ್ದವಳು ದತ್ತಪೀಠದ ಮಾಣಿಕ್ಯಾಧಾರ ಬಳಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾಳೆ. ಕುಟುಂಬದ ಜೊತೆಗಿದ್ದ ಆಕೆ ಮಾಣಿಕ್ಯಾಧಾರದ ಜಲಪಾತದ ಬಳಿ ಹೋಗುವಾಗ ಕುಟುಂಬಸ್ಥರು ಮುಂದೆ ಹೋಗುತ್ತಿದ್ದರು. ಈ ವೇಳೆ ಹಿಂದಿದ್ದವಳು ಕ್ಷಣಾರ್ಧದಲ್ಲಿ ನಾಪತ್ತೆಯಾಗಿದ್ದಾಳೆ.

ಕುಟುಂಬಸ್ಥರು ತಕ್ಷಣ ಸುತ್ತಮುತ್ತ ಹುಡುಕಾಟ ಆರಂಭಿಸಿದರೂ ಕೂಡ ಆಕೆ ಸುಳಿವು ಸಿಕ್ಕಿಲ್ಲ. ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ  ಸಿಬ್ಬಂದಿ, ಎಸ್.ಡಿ.ಆರ್.ಎಫ್ ತಂಡ   ಜೊತೆಗೂಡಿ ಹುಡುಕಾಟ ನಡೆಸುತ್ತಿದ್ದಾರೆ. ಬಾಲಕಿ ನಾಪತ್ತೆಯಾಗಿ ಎರಡು ದಿನಗಳಾದರೂ ಆಕೆಯ ಸುಳಿವು ಪತ್ತೆಯಾಗಿಲ್ಲ.

ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಮುಂದಾಗಿದ್ದಾರೆ. ಮೂರು ಇಲಾಖೆಯ ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿದ್ದಾರೆ. ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡುತ್ತಿದೆ. ಆದರೆ, ಜಾರಿದ್ದಾಳೆ ಅನ್ನೋದಕ್ಕೆ ಮಳೆ ಇಲ್ಲ. ಕಾಡು ಬೇಸಿಗೆಗೆ ಒಣಗಿ ಬಿಡಿಬಿಡಿಯಾಗಿದೆ. ನಾಪತ್ತೆಯಾದ ಒಂದು ಗಂಟೆಯಿಂದಲೇ ಹತ್ತಾರು ಜನ ಹುಡುಕಾಡಿದರೂ ಸಿಗದಿರೋದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಬಾಲಕಿಯನ್ನು ಯಾರಾದರೂ ಅಪಹರಿಸಿರಬಹುದೇ, ಬಾಲಕಿಯೇ ಅಲ್ಲಿಂದ  ತಾನೇ ಸ್ವತಃ ತಪ್ಪಿಸಿಕೊಂಡು ಹೋಗಿರಬಹುದೇ, ಇದರಲ್ಲಿ ಬೇರೆ ವ್ಯಕ್ತಿಗಳ ಕೈವಾಡವಿರಬಹುದೇ ? ಹೀಗೆ ಪ್ರಕರಣ ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ. ಈ ನಡುವೆ ಪ್ರಕರಣದ ಬಗ್ಗೆ ಕೇರಳ ಸರ್ಕಾರ ಮತ್ತು ಮಾಧ್ಯಮಗಳ ಗಮನ ಸೆಳೆದಿದ್ದು, ಕೇರಳಿದಂದಲೂ ಪೊಲೀಸರ ತಂಡ ಸ್ಥಳಕ್ಕೆ ಬರಲಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ