bgs 2_page-0001

 

 

2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮೂಡಿಗೆರೆ ಬಿಜಿಎಸ್ ಒಕ್ಕಲಿಗರ ಸಂಘ ಪದವಿಪೂರ್ವ ಕಾಲೇಜು ಶೇ.100 ಫಲಿತಾಂಶ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ 43, ವಾಣಿಜ್ಯ ವಿಭಾಗದಲ್ಲಿ 35 ಒಟ್ಟು 78 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಾಗಿದೆ.

ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ಬಿ.ಎಸ್.ಹೇಮಾಸಿಂಧೂರ 595 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 5ನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಸ್.ಸಾಕೇತ್ 586 ಅಂಕ, ಬಿ.ಎಂ.ಪ್ರೇಕ್ಷಾ 583 ಅಂಕ ಗಳಿಸಿದ್ದು, ಒಟ್ಟು 17 ವಿದ್ಯಾರ್ಥಿ ಅತ್ಯುನ್ನತ ಹಾಗೂ 17 ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಎಂ.ಕೆ.ರಹಮಾ ಮುಮ್ತಾಜ್, 576 ಅಂಕ, ಎನ್.ಎಸ್.ಶ್ರೇಯಗೌಡ 572 ಅಂಕ ಗಳಿಸಿದ್ದು, 24 ವಿದ್ಯಾರ್ಥಿಗಳು ಅತ್ಯುನ್ನತ ಹಾಗೂ 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಕಾಲೇಜು ಮೂಲಗಳು ತಿಳಿಸಿವೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ