manava hakku_page-0001

 

 

2017 ರಿಂದ ಮೂಡಿಗೆರೆ ತಾಲೂಕಿನ ಮಾನವ ಹಕ್ಕುಗಳ ಒಕ್ಕೂಟದ ಪದಾಧಿಕಾರಿಯಾಗಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ   ರಾಮಚಂದ್ರ (ಮಲೆನಾಡ ಸಿರಿ ಚಂದ್ರು) ಅವರು, ಇದೀಗ   ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ  ಆಯ್ಕೆಯಾಗಿದ್ದಾರೆ.

ಜನಸಾಮಾನ್ಯರ ಧ್ವನಿಯಾಗಿ, ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಸದಾ ಹೋರಾಡುತ್ತಾ ಬಂದಿರುವ ಇವರು, ಮಲೆನಾಡು ಭಾಗದ ಸಾಮಾಜಿಕ ಕೆಲಸಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರ ಸಂಘಟನಾ ಚಾತುರ್ಯ ಮತ್ತು ಸಮಾಜ ಸೇವೆಯನ್ನು ಮೆಚ್ಚಿ ಒಕ್ಕೂಟದ ವತಿಯಿಂದ ಈ ಉನ್ನತ ಜವಾಬ್ದಾರಿಯನ್ನು ನೀಡಲಾಗಿದೆ. ಮಾನವ ಹಕ್ಕುಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ  ಸೈಯ್ಯದ್ ಮುರ್ತುಜ ಹಾಗೂ ರಾಜ್ಯ ಕಾರ್ಯದರ್ಶಿ ಮರಿಯಪ್ಪ ಗುಲ್ಲೇಜಿ ರವರಿಂದ  ಜಿಲ್ಲಾಧ್ಯಕ್ಷರಾಗಿ  ಆಯ್ಕೆಯಾಗಿದ್ದಾರೆ

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪದಾಧಿಕಾರಿಗಳು, “ರಾಮಚಂದ್ರ ಅವರ ಅವಿರತ ಶ್ರಮದಿಂದ ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಒಕ್ಕೂಟವು ಮತ್ತಷ್ಟು ಬಲಗೊಳ್ಳಲಿದೆ ಹಾಗೂ ಶೋಷಿತರಿಗೆ ನ್ಯಾಯ ಒದಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮ್ಮ ನೇಮಕಾತಿಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ರಾಮಚಂದ್ರ ಅವರು, ಜಿಲ್ಲೆಯಾದ್ಯಂತ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ, ಅನ್ಯಾಯಕ್ಕೊಳಗಾದವರ ಪರವಾಗಿ ಸದಾ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಇವರ ಈ ಹೊಸ ಜವಾಬ್ದಾರಿಗೆ ಮಲೆನಾಡಿನ ಗಣ್ಯರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ