balaki 3

 

 

ಮನೆಯಲ್ಲಿ ಹಾಕಿದ್ದ ಸೀರೆ ಜೋಕಾಲಿಗೆ ಕತ್ತು ಸಿಲುಕಿ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿರುವ ಘಟನೆ. ಸೋಮವಾರ ಸಂಜೆ ನಡೆದಿರುವ ದುರ್ಘಟನೆ.

10 ವರ್ಷದ ಲೇಖನಾ ಎಂಬ ಬಾಲಕಿ ಮೃತ ದುರ್ದೈವಿ, ಮನೆಯಲ್ಲಿ ಜೋಕಾಲಿ‌ ಆಡುವಾಗ ಸೀರೆ ಉರುಳಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಲೇಖನಾ ಹೆಬ್ಬಳ್ಳಿ ಗ್ರಾಮದ ಲೋಕೇಶ್ ಶೆಟ್ಟಿ ಎಂಬುವವರ ಮಗಳು ಎಂದು ತಿಳಿದುಬಂದಿದೆ.

ಶುಕ್ರವಾರ ಸಂಜೆ ಮನೆಯ ಮುಂಭಾಗದಲ್ಲಿ ಕಟ್ಟಿದ್ದ ಸೀರೆಯ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಬಾಲಕಿ ಉಸಿರುಕಟ್ಟಿ ಸಾವನ್ನಪ್ಪಿದ್ದಾಳೆ.

ತಂದೆ ತೋಟಕ್ಕೆ ಹೋಗಿದ್ದರು, ತಾಯಿ ಮನೆಯ ಹಿಂಭಾಗದಲ್ಲಿಯೇ ಕೆಲಸದಲ್ಲಿ ನಿರತರಾಗಿದ್ದರು. ಆ ಸಮಯದಲ್ಲಿ ಬಾಲಕಿ ಜೋಕಾಲಿ ಆಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟೊತ್ತಿಗಾಗಲೇ ಬಾಲಕಿ ಕೊನೆಯುಸಿರೆಳೆದಿದ್ದಳು.

ಪೋಷಕರಿಗೆ ಇವಳು ಒಬ್ಬಳೆ ಮಗಳು ಎಂದು ತಿಳಿದುಬಂದಿದ್ದು, ಘಟನೆಯಿಂದ ಪೋಷಕರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚೆಗೆ ಜೋಕಾಲಿಗೆ ಸಿಲುಕಿ ಮಕ್ಕಳು ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚು ಸಂಭವಿಸುತ್ತಿದ್ದು, ಜೋಕಾಲಿಯಲ್ಲಿ ಮಕ್ಕಳನ್ನು ಆಡವಾಡಲು ಬಿಡುವಾಗ ಪೋಷಕರು ಎಚ್ಚರದಿಂದ ಇರಬೇಕಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ