ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಐಟ್ವೆಂಟಿ ಕಾರು ಬಣಕಲ್ ಮಲ್ನಾಡ್ ಕೆಫೆ ಬಳಿ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ತೀವ್ರತೆ ಇದ್ದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಕುರಿತು ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



