ballote

 

 

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್   ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌   ಸಹಿ ಹಾಕಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ (EVM) ಬದಲಿಗೆ ರಾಜ್ಯ ಚುನಾವಣಾ ಆಯೋಗ ಮತಪತ್ರಗಳನ್ನು   ಬಳಸಲಿದೆ.

ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಚುನಾವಣೆಗಳಿಗೆ ಇದು ಅನ್ವಯವಾಗಲಿದೆ. ಚುನಾವಣೆಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಮತದಾನದ ಗುಪ್ತತೆಯನ್ನು ಕಾಯ್ದುಕೊಳ್ಳಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

2015 ರಲ್ಲಿ ಮೊದಲ ಬಾರಿಗೆ ಪಂಚಾಯತ್ ಚುನಾವಣೆಗಳಲ್ಲಿ ಇವಿಎಂ ಬಳಸಲಾಗಿತ್ತು. ಈಗ ಒಂದು ದಶಕದ ನಂತರ ಮತ್ತೆ ಮತಪತ್ರಗಳ ಚುನಾವಣೆಗೆ ಕರ್ನಾಟಕ ಮರಳಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ