ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸ್ ವಿಭಾಗದಿಂದ ಏ.22ರಂದು ಬೆಳಗ್ಗೆ ಗಂಟೆಗೆ ಮೂಡಿಗೆರೆ ತಾ.ಪಂ. ಸಭಾಂಗಣದಲ್ಲಿ ಸಾರ್ವಜನಿಕರಿಗಾಗಿ ಲೋಕಾಯುಕ್ತ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜೆ.ಜೆ.ತಿರುಮಲೇಶ್ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ನಡೆಯುವ ಲೋಕಾಯುಕ್ತ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸುವ ಜತೆಗೆ ದೂರುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ಕೇಳುವ ಪ್ರಶ್ನೆಗಳಿಗೆ ಎಲ್ಲಾ ಇಲಾಖೆ ಅಧಿಕಾರಿಗಳು ಸಮರ್ಪಕವಾದ ಉತ್ತರ ನೀಡುವ ಸಲುವಾಗಿ ತಮ್ಮ ಇಲಾಖೆ ಅಂಕಿ ಅಂಶಗಳು ಮತ್ತು ಇತರೇ ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ತಿಳಿಸಿದ್ದಾರೆ.



