ಚಿಕ್ಕಮಗಳೂರು ಸಮೀಪದ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿಯ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಅಪಘಾತಕ್ಕೀಡಾಗಿ ಹಾಸನದ ಮಹಾಲಕ್ಷ್ಮಿ ಮಂಜಪ್ಪ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಶಾಸಕ ಎಚ್.ಡಿ. ತಮ್ಮಯ್ಯ ಅವರು ಗುರುವಾರ ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಿಳೆಕಲ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಮೆರವಣಿಗೆ ನಡೆಯುತ್ತಿದ್ದ ವೇಳೆಯಲ್ಲಿ ಕಾರ್ ಜನರ ಗುಂಪಿನ ಮೇಲೆ ಚಲಿಸಿ ಬಾಲಕಿ ಸಾನ್ವಿ ಸ್ಥಳದಲ್ಲೇ ಮೃತಪಟ್ಟಿದ್ದರು. ಬುಧವಾರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕರು ಗುರುವಾರ ಹಾಸನದ ಮಹಾಲಕ್ಷ್ಮಿ ಮಂಜಪ್ಪ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಚ್.ಡಿ. ತಮ್ಮಯ್ಯ ಅವರು, ಬಿಳೆಕಲ್ಲು ಗ್ರಾಮದಲ್ಲಿ ನಾವು ಯಾರೂ ಬಯಸದ ಅಹಿತಕರ ಘಟನೆ ನಡೆದಿದೆ. ಮೆರವಣಿಗೆ ನೋಡುವ ಸಂದರ್ಭದಲ್ಲಿ ಒಂದು ಕುಟುಂಬದ ಜನರಿಗೆ ಹೆಚ್ಚಿನ ತೊಂದರೆ ಆಗಿದೆ. ಓರ್ವ ಬಾಲಕಿ ಮೃತಪಟ್ಟಿದ್ದಾಳೆ ಎಂದರು.
ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ 7 ಜನರ ಪೈಕಿ ನಾಳೆ ಚೇತನ್ ಎನ್ನುವವರು ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ. ಇನ್ನುಳಿದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸಾ ವೆಚ್ಚಕ್ಕೆ ಒತ್ತಡ ಹಾಕಬಾರದೆಂದು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಚಿಕ್ಕಮಗಳೂರಿನಿಂದ ಡಿ.ಎಚ್.ಓ ಹಾಗೂ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ಸಹ ಇಲ್ಲಿಗೆ ಭೇಟಿ ನೀಡಿದ್ದಾರೆ. ವರದಿ ಸಿದ್ದಪಡಿಸಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ನೀಡುವಂತೆ ಅವರಿಗೆ ಸೂಚನೆ ನೀಡಿದ್ದೇನೆ. ಸಮಾಜ ಕಲ್ಯಾಣ ಇಲಾಖೆಯ ಸಚಿವರೊಂದಿಗೆ ಮಾತನಾಡುತ್ತೇನೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಹಾಗೂ ಪರಿಹಾರ ನೀಡುವಂತೆ ಮುಖ್ಯಮಂತ್ರಿಯವರನ್ನು ಸಹ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.
ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಿ ಇವರನ್ನು ಮನೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಲಾಗುವುದು.
ಆಕ್ಸಿಡೆಂಟ್ ಮಾಡಿರುವವರ ಬಗ್ಗೆ ನಮಗೆ ಸ್ವಲ್ಪವೂ ಕನಿಕರ ಇಲ.್ಲ ನಮ್ಮ ಸಹಕಾರ ಇರುವುದು ಅಪಘಾತದಲ್ಲಿ ಗಾಯಗೊಂಡವರಿ



