sslc 2

 

 

ಕರ್ನಾಟಕದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು. ಶೇ.91.1 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಮಾರ್ಚ್ 18 ರಿಂದ ಏಪ್ರಿಲ್ 2ರ ವರೆಗೆ ನಡೆದಿದ್ದ ಈ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಗುರುವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ  ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

karresults.nic.in ಅಥವಾ kseab.karnataka.gov.in ಈ ಎರಡು ವೆಬ್‌ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ ಎಸ್‌ಎಂಎಸ್ (SMS) ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿದೆ.

ಬೃಂದಾ

ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ಚಿಕ್ಕಮಗಳೂರಿನ ಸೆಂಟ್ ಮೇರಿಸ್ ಶಾಲೆಯ ಬೃಂದಾ,  ದಾವಣಗೆರೆಯ ಭರತ್​,  ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ