WhatsApp Image 2026-04-26 at 7.25.52 PM

 

 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ನಿಡುವಾಳೆ ಗ್ರಾಮದಲ್ಲಿ ಮಳೆಯ ನಡುವೆ  ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಮೂಡಿಗೆರೆ ತಾಲೂಕಿನ ಹಾರ್ಮಕ್ಕಿ ಗ್ರಾಮದ ಅಶೋಕ್ ಮತ್ತು ಅವರ ಪುತ್ರ ಕಿರಣ್ ಹಾಗೂ ಪ್ರಫುಲ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ರಕ್ತಸ್ರಾವದಿಂದ ಅವರು ಗಂಭೀರ ಸ್ಥಿತಿಯಲ್ಲಿ ಇದ್ದರು.

ಈ ವೇಳೆ ಹೊರನಾಡು ದೇವಸ್ಥಾನದಲ್ಲಿ ನಡೆದ ಸಾಮೂಹಿಕ ಮದುವೆ ಕಾರ್ಯಕ್ರಮದಿಂದ ವಾಪಸ್ಸು ಬರುತ್ತಿದ್ದ ಶಾಸಕಿ ನಯನ ಮೋಟಮ್ಮ ಅವರು ಘಟನೆ ಗಮನಿಸಿ ತಕ್ಷಣವೇ ನೆರವಿಗೆ ಧಾವಿಸಿದರು.

ಶಾಸಕಿಯವರು ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ  ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಕೊಡಿಸಿದರು. ನಂತರ ಕಿರಣ್ ಹಾಗೂ ಪ್ರಫುಲ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಕಾಲದಲ್ಲಿ ಸ್ಪಂದಿಸಿದ ಶಾಸಕಿಯವರ ಕಾರ್ಯಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ