ಶುಕ್ರವಾರ ನಿಧನರಾದ ಮೂಡಿಗೆರೆ ತಾಲ್ಲೂಕು ಕಾಂಗ್ರೇಸ್ ಪಕ್ಷದ ಹಿರಿಯ ನಾಯಕಿ, ಸಮಾಜಸೇವಕಿ ಶ್ರೀಮತಿ ಟಿ. ಕಮಲಾಕ್ಷಮ್ಮನವರ ಪಾರ್ಥೀವ ಶರೀರಕ್ಕೆ ಕಾಂಗ್ರೇಸ್ ಪಕ್ಷದ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು.

ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಅವರ ನೇತೃತ್ವದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮೃತರ ಗೃಹಕ್ಕೆ ಭೇಟಿ ನೀಡಿ ಪಾರ್ಥೀವ ಶರೀರಕ್ಕೆ ಧ್ವಜವನ್ನು ಹೊದಿಸಿ, ಹೂಗುಚ್ಚ ಇಟ್ಟು ಅಂತಿಮ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಮೋಟಮ್ಮ ; ಕಮಲಾಕ್ಷಮ್ಮ ನನ್ನ ಆತ್ಮೀಯ ಸ್ನೇಹಿತೆಯಾಗಿದ್ದರು. ಅವರು ಯಾವುದೇ ಅಧಿಕಾರಕ್ಕೆ ಆಸೆಪಡದೇ ಹಲವು ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ನಿರತರಾಗಿದ್ದರು. ಸಾಂತ್ವಾನ ಕೇಂದ್ರದ ಮೂಲಕ ನೂರಾರು ನೊಂದ ಮಹಿಳೆಯರಿಗೆ ದಾರಿದೀಪವಾಗಿದ್ದರು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದರು. ಅವರ ಅಗಲಿಕೆ ಅತೀವ ನೋವನ್ನು ಉಂಟುಮಾಡಿದೆ. ಅವರ ಸೇವೆ ಸದಾ ಸ್ಮರಣೀಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹೆಚ್.ಜಿ.ಸುರೇಂದ್ರ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಎಸ್.ಜಯರಾಂ, ಶ್ರೀಮತಿ ಜಯಮ್ಮ, ಎಂ.ಎನ್. ಅಶ್ವಥ್, ಬಿ.ಡಿ.ಮಂಜುನಾಥ್, ಷಣ್ಮುಖಾನಂದಾ ಸೇರಿದಂತೆ ಹಲವು ಮುಖಂಡರು, ಕುಟುಂಬ ಸದಸ್ಯರು ಉಪಸ್ಥಿತರಿದ್ದರು.



