ಸಬ್ ಇನ್ಸ್‌ಪೆಕ್ಟರ್ ಒಬ್ಬರ ಪತ್ನಿ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ಈ ದುರ್ಘಟನೆ ನಡೆದಿದೆ.
ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ 15 ವರ್ಷಗಳ ಹಿಂದೆ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.
ಪದ್ಮ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪದ್ಮ ಅವರ ತಾಯಿ ದೂರು ನೀಡಿದ್ದು, ಅಸಹಜ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ.



