gallu

 

 

ಬಿಜೆಪಿ ಯುವ ಮೋರ್ಚಾದ ಗಂಗಾವತಿ ನಗರ ಘಟಕದ ಅಧ್ಯಕ್ಷ ವೆಂಕಟೇಶ   ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಶಿಕ್ಷೆ ತೀರ್ಪು ಪ್ರಕಟಿಸಿದರು. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

ಮೊದಲಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್​ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

ಗಂಗಾವತಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದ ಮಾರುತಿ ಎಂಬ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ವೆಂಕಟೇಶ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಲ್ಲದೇ ಮಾರುತಿ ಚಿಕಿತ್ಸೆಗೆ ಕೊನೆಯವರೆಗೂ ಬೆಂಬಲವಾಗಿ ನಿಂತಿದ್ದ ಎಂಬ ಕಾರಣಕ್ಕೆ ವೆಂಕಟೇಶನನ್ನು ಕೊಲೆ ಮಾಡಿದ್ದೀರಿ. ಸಭ್ಯ ನಾಗರಿಕ ಸಮಾಜದ ಇಂತಹ ಕೃತ್ಯಗಳನ್ನು ಒಪ್ಪುವುದಿಲ್ಲ. ಅಪರಾಧ ಕೃತ್ಯಗಳ ಹಿನ್ನೆಲೆ ಪರಿಗಣಿಸಿ ಗಲ್ಲು ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ತೀರ್ಪು ಪ್ರಕಟಿಸಿದರು.

ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣ ಸಂಬಂಧ ಆರು ಜನ ಅರೋಪಿಗಳನ್ನು ದೋಷಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿ, ಶಿಕ್ಷೆ ಪ್ರಮಾಣ ಕಾಯ್ದಿರಿಸಿತ್ತು. ಅಂತೆಯೇ ಇಂದು ನ್ಯಾಯಾಧೀಶರು, ಆರು ಜನರಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿದ್ದಾರೆ.

ವೆಂಕಟೇಶ

ಅಕ್ಟೋಬರ್ 7 2025 ರ ತಡರಾತ್ರಿ ಊಟ ಮುಗಿಸಿಕೊಂಡು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ವೆಂಕಟೇಶ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಹಿಂಬಾಲಿಸಿದ ಯುವಕರ ಗುಂಪು, ದ್ವಿಚಕ್ರ ವಾಹನಕ್ಕೆ ಗುದ್ದಿ ಬೀಳಿಸಿದ್ದರು.

ಬಳಿಕ ಕೆಳಕ್ಕೆ ಬಿದ್ದ ವೆಂಕಟೇಶನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ ಮನಬದಂತೆ ಕೊಚ್ಚಿ ಕೊಲೆ ಮಾಡಿದ್ದರು. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೆಂಕಟೇಶನನ್ನು ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಮಧ್ಯರಾತ್ರಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ