vara_page-0001

 

 

ಹತ್ತುದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ  ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು.

ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ವಧುವಿನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು.

ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಗುರುವಾರ ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು.

ಕಾರು ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಮಗನ ಮದುವೆ ಮಾಡಿ ಸಂಭ್ರಮಿಸಬೇಕಿದ್ದ ಪೋಷಕರು, ಮಗನ ಹಠಾತ್ ಸಾವು ಕೇಳಿ ಆಘಾತಕ್ಕೊಳಗಾಗಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿದ್ದ ಎರಡೂ ಕುಟುಂಬಗಳಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.

ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ