dfafa_page-0001

 

 

ಶೃಂಗೇರಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಬಿಜೆಪಿಯ ಡಿ.ಎನ್. ಜೀವರಾಜ್ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯಾಗಿದೆ. ಶೃಂಗೇರಿ ವಿಧಾನ ಸಭಾ ಕ್ಷೇತ್ರದ ರಿಟರ್ನಿಂಗ್ ಆಫೀಸರ್  ಅವರು ಅಧಿಕೃತ ಘೋಷಣ ಪತ್ರ ನೀಡಿದ್ದಾರೆ.

ಶನಿವಾರ ದಿನವಿಡೀ ನಡೆದಿದ್ದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಅಂತಿಮಾಗಿ ಡಿ.ಎನ್. ಜೀವರಾಜ್ ಅವರು ರಾಜೇಗೌಡರಿಗಿಂತ ಒಟ್ಟಾರೆಯಾಗಿ 52 ಮತಗಳ ಅಂತರದಿಂದ ಬಹುಮತ ಪಡೆದಿದ್ದರು. ಆದರೆ ಅಂದು ಯಾವುದೇ ಅಧಿಕೃತ ಘೋಷಣೆ ಮಾಡಿರಲಿಲ್ಲ. ವರದಿಯನ್ನು ಚುನಾವಣಾ ಆಯೋಗ ಮತ್ತು ಹೈಕೋರ್ಟ್ ಗೆ ಸಲ್ಲಿಸಲಾಗುವುದು ಎಂದು ಚುನಾವಣಾ ಅಧಿಕಾರಿಗಳು ಹೇಳಿಕೆ ನೀಡಿದ್ದರು. ಆದರೆ ನಿನ್ನೆ ಭಾನುವಾರ ತಡರಾತ್ರಿ ಚುನಾವಣಾ ಅಧಿಕಾರಿಗಳು ಡಿ.ಎನ್. ಜೀವರಾಜ್ ಅವರಿಗೆ ಅಧಿಕೃತ ಘೋಷಣಾ ಪತ್ರವನ್ನು ನೀಡಿದ್ದಾರೆ. ಈ ಮೂಲಕ ಇಂದಿನಿಂದ ಬಿಜೆಪಿಯ ಡಿ.ಎನ್. ಜೀವರಾಜ್ ಅವರು ಶೃಂಗೇರಿ ಕ್ಷೇತ್ರದ ಶಾಸಕರಾಗಿ ಅಧಿಕೃತವಾಗಿ ಘೋಷಣೆಯಾಗಿದೆ.

2023ರ ಚುನಾವಣೆಯಲ್ಲಿ ಕೇವಲ 201 ಮತಗಳಿಂದ ಮುನ್ನಡೆ ಪಡೆದು ಕಳೆದ ಮೂರು ವರ್ಷಗಳಿಂದ ಕಾಂಗ್ರೇಸ್ ನ ಟಿ.ಡಿ. ರಾಜೇಗೌಡ ಅವರು ಶೃಂಗೇರಿ ಕ್ಷೇತ್ರದ ಶಾಸಕರಾಗಿದ್ದರು. ಆದರೆ ಪರಾಜಿತ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರುಎಣಿಕೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಬರೋಬ್ಬರಿ ಮೂರು ವರ್ಷಗಳ ನಂತರ ರಾಜ್ಯ ಹೈಕೋರ್ಟ್ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆಗೆ ಆದೇಶ ಮಾಡಿತ್ತು.

ನ್ಯಾಯಾಲಯದ ಆದೇಶದಂತೆ ಮೇ 2 ರಂದು ಶನಿವಾರ ಚಿಕ್ಕಮಗಳೂರ ಐ ಡಿ ಎಸ್ ಜಿ ಕಾಲೇಜಿನಲ್ಲಿ ಅಂಚೆ ಮತರಗಳ ಮರುಎಣಿಕೆ ಕಾರ್ಯ ನಡೆದಿತ್ತು. ಬೆಳಗ್ಗೆಯಿಂದಲೂ ಹೈಡ್ರಾಮಾ ನಡೆದು ತಡರಾತ್ರಿ ಮತ ಎಣಿಕೆ ಪೂರ್ಣಗೊಂಡಿತ್ತು. ಮರು ಎಣಿಕೆಯಲ್ಲಿ  ಟಿ.ಡಿ. ರಾಜೇಗೌಡರಿಗೆ ಬಿದ್ದಿದ್ದ 255 ಅಂಚೆ ಮತಗಳು ತಿರಸ್ಕೃತಗೊಂಡಿದ್ದವು ಇದರಿಂದ ಒಟ್ಟಾರೆ ಫಲಿತಾಂಶದ ಮೇಲೆ ಪರಿಣಾಮ ಬೀರಿತ್ತು. ಒಟ್ಟಾರೆ ಲೆಕ್ಕಾಚಾರದಲ್ಲಿ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಮುನ್ನಡೆ ಪಡೆದಿದ್ದರು.

ಇದೀಗ ಚುನಾವಣಾ ಅಧಿಕಾರಿಗಳು ಡಿ.ಎನ್. ಜೀವರಾಜ್ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದಾದ್ಯಂತ ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಶೃಂಗೇರಿ ಕ್ಷೇತ್ರದಲ್ಲಿ ದೊಡ್ಡ ರಾಜಕೀಯ ಪಲ್ಲಟವಾಗಿದೆ. ಕಾಂಗ್ರೇಸ್ ಒಂದು ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದು, ಬಿಜೆಪಿ ರಾಜ್ಯದಲ್ಲಿ ಒಂದು ಶಾಸಕ ಸ್ಥಾನವನ್ನು ಹೆಚ್ಚಿಸಿಕೊಂಡಿದೆ. ಇದರೊಂದಿಗೆ ಶೃಂಗೇರಿ ಕ್ಷೇತ್ರದಲ್ಲಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಹೆಚ್ಚಾಗಿದೆ.

ಈ ಫಲಿತಾಂಶ ಶಾಸಕ ಟಿ.ಡಿ.ರಾಜೇಗೌಡ ಮತ್ತು ಕಾಂಗ್ರೇಸ್ ವಲಯಕ್ಕೆ ದೊಡ್ಡ ಶಾಕ್ ನೀಡಿದೆ. ರಾಜೇಗೌಡರ ಮುಂದಿನ ರಾಜಕೀಯ ನಡೆ ಹಾಗೂ ಪ್ರತಿಕ್ರಿಯೆಯ ಬಗ್ಗೆ ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ