ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಾಲ್ಕು ಮಕ್ಕಳು ನೀರು ಪಾಲಾಗಿದ್ದು ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.
ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಈ ಘಟನೆ ನಡೆದಿದೆ. ಮಹಾದಿಯಾ, ಅರುನುಸ್, ನಾಯುಸ್, ಅಬ್ದುಲ್ ರೆಹಮಾನ್ ಮೃತ ಮಕ್ಕಳು. ನಾಲ್ಕು ವರ್ಷದ ಅರ್ಮಾನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮೃತರೆಲ್ಲರೂ 5 ರಿಂದ 10 ವರ್ಷದೊಳಗಿನ ಮಕ್ಕಳು.
ಬಾತುಕೋಳಿ ಕೆರೆಗೆ ಹೋಯಿತು ಎಂದು ಹಿಡಿಯಲು ಹೋಗಿ ಜಾರಿ ಬಿದ್ದು ಈ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳು ಸ್ಥಳೀಯ ಮತ್ತು ಇನ್ನಿಬ್ಬರು ಮಕ್ಕಳು ಸಂಬಂಧಿಕರ ಮನೆಗೆ ಬಂದವರು ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾದಾಖಲಾಗಿದೆ. ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆ ಮುಂಭಾಗ ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.



