ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯಲ್ಲಿ ಶೇ 90 ಕ್ಕಿಂತ ಅಧಿಕ ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಾ ಪುರಸ್ಕಾರ ಮಾಡಲಿದೆ.
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರು ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು, ವಿದ್ಯಾರ್ಥಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗಿರಬೇಕು, ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಯನ್ನು ಸಂಘದ ಜಿಲ್ಲಾ, ತಾಲೂಕು, ಯೋಜನಾ ಶಾಖೆ ಅಧ್ಯಕ್ಷರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತ ವಿದ್ಯಾರ್ಥಿಗಳು ತಮ್ಮ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಶಾಲಾ, ಕಾಲೇಜಿನ ಅಧಿಕೃತ ಅಂಕಪಟ್ಟಿ, ಸಂಘವು ನೀಡಿರುವ ನಮೂನೆಯಲ್ಲಿ ಕಚೇರಿ ಮುಖ್ಯಸ್ಥರ ಮತ್ತು ಶಾಖಾ ಸಂಘದ ದೃಢೀಕರಣ ಪತ್ರದೊಂದಿಗೆ ಮೇ 25ರ ಒಳಗೆ https://power media.info ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ 080 22354783/84 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.



