suddi-2

 

 

ಚಿಕ್ಕಮಗಳೂರು ನಗರಸಭೆ ಪ್ರಭಾರಿ ಅಧ್ಯಕ್ಷರಾಗಿ ಶ್ರೀಮತಿ ಲಲಿತಾ ರವಿನಾಯ್ಕ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷೆ ಶೀಲಾ ದಿನೇಶ್ ರಾಜೀನಾಮೆ ಅಂಗೀಕಾರದ ಹಿನ್ನೆಲೆ ಪ್ರಭಾರಿ ಅಧ್ಯಕ್ಷರಾಗಿ ಲಲಿತಾ ನಾಯ್ಕ್ ಅಧಿಕಾರ ವಹಿಸಿಕೊಂಡರು.

ಅಭಿನಂದನೆ ಸಲ್ಲಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ಮುಂದಿನ 10 ತಿಂಗಳ ಅವಧಿಗೆ ಎರಡು ಪಕ್ಷಗಳ ವರಿಷ್ಟರ ತೀರ್ಮಾನದಿಂದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‍ಶೆಟ್ಟಿ ಮಾತನಾಡಿ ಅಧಿಕಾರ ಶಾಶ್ವತವಲ್ಲ, ಅಧಿಕಾರದಲ್ಲಿದ್ದಾಗ ಎಷ್ಟು ಒಳ್ಳೆ ಕೆಲಸ ಮಾಡುತ್ತೇವೆ ಎಂಬುದು ಮುಖ್ಯ, ನೂತನವಾಗಿ ಆಯ್ಕೆಯಾಗಿರುವ ನಗರಸಭೆ ಪ್ರಭಾರಿ ಅಧ್ಯಕ್ಷರು ಸಿಕ್ಕಿರುವ ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ನಗರಸಭೆ ಸದಸ್ಯರಾದ ಕವಿತಾ ಶೇಖರ್, ಮಾಜಿ ಉಪಾಧ್ಯಕ್ಷ ಕಾಯಿರವಿ, ಬಿಜೆಪಿ ಮುಖಂಡ ಹೆಚ್.ಕೆ.ಕೇಶವಮೂರ್ತಿ, ಕಾರ್ಯಕರ್ತರು, ಸಂಘ ಸಂಸ್ಥೆಯ ವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ