ನೀಟ್ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲ ಹಾಗೂ ಬೇಜಾವಾಬ್ದಾರಿ ವಹಿಸಿದ್ದು ಕೂಡಲೇ ಕೇಂದ್ರ ಸರ್ಕಾರ ವಜಾಗೊಳಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಬುಧವಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸಂಸದರ ಕಚೇರಿಗೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ವಿದ್ಯಾರ್ಥಿಗಳ ಜೀವನದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುವ ಜೊತೆಗೆ ಪರೀಕ್ಷೆ ರದ್ದುಗೊಳಿಸಿ ರುವುದನ್ನು ವಿರೋಧಿಸಿ ಯುವಕಾಂಗ್ರೆಸ್ ಮತ್ತು ಎನ್‍ಎಸ್‍ಯುಐ ಕಾರ್ಯಕರ್ತರು ನಗರದ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಹರಸಾಹಸಪಟ್ಟು ಕಾರ್ಯಕರ್ತರನ್ನು ವಶಕ್ಕೆ ಪಡೆ ದುಕೊಂಡರು.
ಈ ಕುರಿತು ಮಾತನಾಡಿದ ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್‍ಗೌಡ ದಂಡಿನಮಕ್ಕಿ ರಾಜಸ್ಥಾನ ಮತ್ತು ಉತ್ತರಾಖಾಂಡ್‍ದಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಕೇಳಿಬಂದಿರುವ ಪ್ರಶ್ನೆ ಪತ್ರಿಕೆ ಸೋರಿಕೆಯ ವದಂ ತಿಗೆ ಪುಷ್ಪಿ ಕೊಡುವಂತೆ ನಡೆದ ಪರೀಕ್ಷೆಯ ಅಕ್ರಮಗಳ ಆರೋಪಗಳು ಸರಿಯಾಗಿದೆ ಮತ್ತು ಪಾರದರ್ಶಕತೆ ಕಾಪಾಡಲು ಕೇಂದ್ರ ವಿಫಲವಾಗಿದೆ ಎಂದರು.
ಪ್ರಶ್ನೆ ಪರೀಕ್ಷೆ ಸೋರಿಕೆ ಸಂಬಂಧ ಕೇಂದ್ರ ಬಿಜೆಪಿ ಸರ್ಕಾರ ಪರೀಕ್ಷೆಯನ್ನೇ ರದ್ದು ಮಾಡಿರುವುದು ಸರಿ ಯಲ್ಲ. ಗ್ರಾಮೀಣ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ತಮ್ಮ ಕುಟುಂಬದ ಆರ್ಥಿಕ ಸಂಕಷ್ಟಗ ಳ ನಡುವೆಯೂ ವಿದ್ಯಾಭ್ಯಾಸಕ್ಕಾಗಿ ಹೋರಾಡುತ್ತಿದ್ದಾರೆ ಎಂದು ತಿಳಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ಕಂಡಿರುವ ಮಧ್ಯಮ ವರ್ಗದ ಕುಟುಂಬದ ಲಕ್ಷಾಂತರ ವಿದ್ಯಾರ್ಥಿಗಳು ಹಗಲು-ರಾತ್ರಿ ಪರಿಶ್ರಮದಿಂದ ಭವಿಷ್ಯವನ್ನಲ್ಲದೇ ಪಾಲಕರ ನಂಬಿಕೆ ಮತ್ತು ವಿಶ್ವಾಸಕ್ಕೆ ಕೇಂದ್ರ ಸರ್ಕಾರ ಹಾಳು ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ದೂರಿದರು.
ನೀಟ್ ವ್ಯವಸ್ಥೆಯನ್ನು ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶದಲ್ಲಿ ಪಾರದರ್ಶಕತೆ, ಸಮಾನ ಅವ ಕಾಶ ಹಾಗೂ ಮೆರಿಟ್ ಆಧಾರಿತ ಪ್ರವೇಶ ಕಲ್ಪಿಸುವ ಉದ್ದೇಶದಿಂದ ಮಾಜಿ ಪ್ರಧಾನಿ ಮನಮೋಹನ್‍ಸಿಂಗ್ ನೇತೃತ್ವದ ಯುಪಿಎ ಸರ್ಕಾರ 2012ರಲ್ಲಿ ಈ ವ್ಯವಸ್ಥೇಯನ್ನು ಜಾರಿಗೆ ತರಲಾಯಿತು ಎಂದರು.
ಇಂದು ಅದೇ ವ್ಯವಸ್ಥೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, ಕೋಚಿಂಗ್ ಮಾಫಿಯಾ, ಪರೀಕ್ಷಾ ಅಕ್ರ ಮ ಮತ್ತು ಹಣದ ಪ್ರಭಾವದಿಂದ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಳ್ಳುತ್ತಿದೆ. ಕಳೆದ 2024ರಲ್ಲಿಯೂ ನೀಟ್ ಪ್ರಶ್ನೆ ಪತ್ರಿಕೆ ವಿವಾದ ದೇಶದಾದ್ಯಂತ ಕೇಳಿಬಂದಿದ್ದರೂ ಸಹ ಈ ವಿಷಯವನ್ನು ಕೇಂದ್ರ ಸರ್ಕಾರ ಮುಚ್ಚಿಹಾಕಿತ್ತು ಎಂದು ಆರೋಪಿಸಿದರು.
ಈ ನಡುವೆಯೂ ವಿದ್ಯಾರ್ಥಿಗಳಲ್ಲಿ ಸಂಪೂರ್ಣ ವಿಶ್ವಾಸ ಮರುಸ್ಥಾಪನೆಯಾಗಿಲ್ಲ. ರಾಷ್ಟ್ರಮಟ್ಟದ ಪರೀ ಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದ್ದು ಕೂಡಲೇ ವ ಜಾಗೊಳಿಸಿ ವಿದ್ಯಾರ್ಥಿಗಳ ಮತ್ತು ಪಾಲಕ್ಲಿ ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಿಲ್, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಲಾಕೇಶ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿ ನಲ್ಲೂರು, ಮುಖಂಡರುಗಳಾದ ಸೀಮಾ ಬಾನು, ಅಕ್ಷಯ್ ರಾಥೋಡ್, ಭರತ್ ಚಿಟ್ಟಿಯಾರ್, ಎಕ್ರೆಸ್ ಖಾನ್, ಮಹಮ್ಮದ್ ತಾಯೀಬ್, ರತನ್, ಸೋಮೇಶ್, ಕಲೀಲ್ ಖಾನ್, ಮಂಜೇಶ್ ಹಾಜರಿದ್ದರು.



