suddi-5 (4)

 

 

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು  ಅಂಬೇಡ್ಕರ್ ಹಬ್ಬವಾಗಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ  ಬಿ.ಆರ್. ಯತೀಶ್ ಗೌಡ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ. ಅಂಬೇಡ್ಕರ್ ಅವರ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.

ಮಾಜಿ ಸಚಿವ ಬಿ.ಬಿ. ನಿಂಗಯ್ಯ ಮಾತನಾಡಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಾತಿ ವ್ಯವಸ್ಥೆ ಜಾರಿಗೆ ತಂದ ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳಿಗೂ ಮಹತ್ವ ನೀಡಿದ ಮಹಾನ್ ನಾಯಕರು ಎಂದು ಸ್ಮರಿಸಿದರು.

ಅಂಬೇಡ್ಕರ್ ವಿಚಾರಗಳ ಕುರಿತು ಉಪನ್ಯಾಸ ನೀಡಿದ ಮರಗುಂದ ಪ್ರಸನ್ನ ಗೌಡ, ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ದೊರಕಲು ಅಂಬೇಡ್ಕರ್ ಅವರ ಕೊಡುಗೆ ಅಪಾರ. ಕಾರ್ಮಿಕರು, ಮಹಿಳೆಯರು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಅವರು ಅನೇಕ ಕಾನೂನುಗಳನ್ನು ರೂಪಿಸಿದರು? ಎಂದು ಹೇಳಿದರು.

ಲೋಕವಳ್ಳಿ ರಮೇಶ್ ಮಾತನಾಡಿ, ಎಲ್ಲಾ ಜಾತಿ ಧರ್ಮದ ಜನರು ಸಮಾನವಾಗಿ ಅಧಿಕಾರ ಹಂಚಿಕೊಂಡಿರುವ ಮಾದರಿ ಗ್ರಾಮ ಪಂಚಾಯಿತಿ ಬೆಟ್ಟಗೆರೆ ಗ್ರಾಮ ಪಂಚಾಯಿತಿ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅಂಬೇಡ್ಕರ್ ಕ್ಲಾಸ್‍ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೆ ಬಿ.ಎಂ. ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಬಿ.ಆರ್. ಸುಬ್ಬಯ್ಯ, ಜಾಕೀರ್ ಹುಸೇನ್, ಕೆ.ಎನ್. ಮನೂಜ್, ಮರಗುಂದ ಪ್ರಸನ್ನ, ಬಿ.ಎಂ. ಮಂಜುನಾಥ, ಜಯಪಾಲ್ ಗೌಡ, ಕೆ.ಎನ್. ಕುಮಾರ್, ಬಿ.ಬಿ. ಅಶೋಕ್, ಬಿ.ಎಂ. ಅಣ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಹ ಕಾರ್ಯದರ್ಶಿ ನಿಖಿಲ್ ಸ್ವಾಗತಿಸಿದರು. ಕಾರ್ಯದರ್ಶಿ ಲೋಕೇಶ್ ಬೆಟ್ಟಗೆರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ