ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 106.17 ರೂಗೆ ಏರಿಕೆಯಾದರೆ ಡಿಸೇಲ್ ದರ ಪ್ರತಿ ಲೀಟರ್ ಗೆ 94.10 ರೂ. ತಲುಪಿದೆ.
ಪೆಟ್ರೋಲ್, ಡೀಸೆಲ್ ದರ ಏರಿಕೆಯಾದ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(CNG) ಬೆಲೆ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್‌ಜಿ ದರವನ್ನು 2 ರೂ. ಏರಿಸಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ 1 ಕೆಜಿ ಸಿಎನ್‌ಜಿ ದರ 90 ರೂ.ಗೆ ಏರಿಕೆಯಾಗಿದೆ.



