Screenshot_2026-05-16-17-48-15-85_6012fa4d4ddec268fc5c7112cbb265e7_copy_996x830

 

 

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಾರಿ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದೆ

ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ವ್ಯಾಪಕವಾದ ಮಳೆಯಾಗಿದ್ದು ಶನಿವಾರ ಸಂಜೆ ಜಿಲ್ಲೆಯ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿತ್ತು ಸಂಜೆ ದಿಢೀರ್ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಆಲ್ದೂರು ಮೂಡಿಗೆರೆ ಬಣಕಲ್ ಗೋಣಿಬೀಡು, ಸುತ್ತಮುತ್ತ ವ್ಯಾಪಕವಾದ ಮಳೆಯಾಗಿದೆ.

ಮಳೆ ಮತ್ತು ಗಾಳಿಯಿಂದ ಅನೇಕ ಕಡೆ ಮರಗಳು ಧರೆಗುರುಳಿವೆ. ಚಿಕ್ಕಮಗಳೂರು ಮೂಡಿಗೆರೆ ರಸ್ತೆಯ ಕೆಳಗೂರು ಸಮೀಪ ಬೃಹತ್ ಗಾತ್ರದ ಮರ ಒಂದು ಧರೆಗುರುಳಿದ್ದು ಜೊತೆಗೆ ಅನೇಕ ಸಣ್ಣಪುಟ್ಟ ಮರಗಳು ಬಿದ್ದಿವೆ ಇದರಿಂದ ರಸ್ತೆ ಸಂಚಾರ ಸಂಚಾರ ಸ್ಥಗಿತಗೊಂಡಿದೆ ಮರತೆರವು ಕಾರ್ಯಾಚರಣೆ ಬರದಿಂದ ಸಾಗಿದೆ. ರಸ್ತೆಯ ಎರಡು ಬದಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಮೂಡಿಗೆರೆ ಚಿಕ್ಕಮಗಳೂರು ನಡುವೆ ಸಂಚರಿಸುವ ವಾಹನಗಳನ್ನು ಹಾಂದಿ ಆಲ್ದೂರು ವಸ್ತಾರೆ ಮೂಲಕ ಕಳುಹಿಸಲಾಗುತ್ತಿದೆ. ಹಲವು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು ವಿದ್ಯುತ್ ಕಡಿತ ಉಂಟಾಗಿದೆ.

ಶನಿವಾರ ಸಂಜೆ ಸುಮಾರು ನಾಲ್ಕರಿಂದ ಐದು ಗಂಟೆಯ ಸಮಯದಲ್ಲಿ ಸುರಿದ ಮಳೆಯಿಂದ ಭೂಮಿ ತಂಪಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇನ್ನೂ ಎರಡು ದಿನ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ