ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂಧನ ಮಿತಬಳಕೆ ಮತ್ತು ಚಿನ್ನಖರೀದಿ ಮುಂದೂಡಿಕೆಗೆ ದೇಶದ ಜನರಲ್ಲಿ ಮನವಿ ಮಾಡಿದ್ದರು.
ಮಧ್ಯಪ್ರಾಚ್ಯ ಯುದ್ಧ ಹಿನ್ನಲೆಯಲ್ಲಿ ದೇಶದಲ್ಲಿ ಮುಂಬರುವ ದಿನಗಳಲ್ಲಿ ಇಂಧನ ಬಿಕ್ಕಟ್ಟು ತಲೆದೋರಬಹುದು ಎಂಬ ಹಿನ್ನಲೆಯಲ್ಲಿ ಪ್ರಧಾನಿಯವರು ದೇಶದ ಜನರಲ್ಲಿ ಮಿತವ್ಯಯಕ್ಕೆ ಮನವಿ ಮಾಡಿದ್ದರು.
ಪ್ರಧಾನಿಯವರ ಮನವಿಗೆ ಸ್ಪಂದಿಸಿರುವ ಕರ್ನಾಟಕ ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ತಮಗೆ ನೀಡಿರುವ ಬೆಂಗಾವಲು ವಾಹನ (ಎಸ್ಕಾರ್ಟ್) ವನ್ನು ಹಿಂಪಡೆಯುವಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.




