August 23, 2026
;
dubare 5_page-0001

 

 

ಸಾಕಾನೆಗಳ   ಕಾದಾಟದಲ್ಲಿ ಪ್ರವಾಸಿ ಮಹಿಳೆಯೊಬ್ಬಳು ಸಾವಿಗೀಡಾದ ದುರ್ಘಟನೆ ಕುಶಾಲನಗರ   ತಾಲೂಕಿನ ದುಬಾರೆ ಶಿಬಿರದಲ್ಲಿ ನಡೆದಿದೆ‌.

ಚೆನೈ ಮೂಲದ ಜಿನ್ಮು (33) ಸಾವಿಗೀಡಾದ ದುರ್ದೈವಿ. ಮೇ 18ರ ಬೆಳಿಗ್ಗೆ ಮಹಿಳೆ ಹಾಗೂ ಅವರ ಪತಿ ಜೋಯಲ್ ಹಾಗೂ ಮಗು ದುಬಾರೆ   ಸಾಕಾನೆ ಶಿಬಿರಕ್ಕೆ ಅಗಮಿಸಿದ್ದರು. ಕೆಲ ಸಮಯ ಸಾಕಾನೆಗಳೊಂದಿಗೆ ಫೋಟೋ ಸಹ ತೆಗೆಸಿಕೊಂಡಿದ್ದರು. ಬಳಿಕ ಸಾಕಾನೆಗಳಿಗೆ ಸ್ನಾನ ಮಾಡಿಸಿ ನೀರು ಕುಡಿಸಲು ಮಾವುತರು ಹಾಗೂ ಕಾವಾಡಿಗಳು ತೆರಳಿದ ಸಂದರ್ಭದಲ್ಲಿ, ಕೆಲ ಪ್ರವಾಸಿಗರು ಸಾಕಾನೆಗಳಿಗೆ ಸ್ನಾನ ಮಾಡಿಸಲು ಮುಂದಾಗಿದ್ದಾರೆ.

ದಂಪತಿ ಸಹ ಸಾಕಾನೆಗಳಿಗೆ ಸ್ನಾನ ಮಾಡಿಸಲು ಮುಂದಾಗಿದ್ದರು. ಈ ವೇಳೆ ಮಾರ್ತಾಂಡ ಹಾಗೂ ಕಂಜನ್ ಆನೆಗಳ ನಡುವೆ ನದಿಯಲ್ಲೇ ಕಾದಾಟ ಶುರುವಾಗಿದೆ. ನೋಡು ನೋಡುತ್ತಿದ್ದಂತೆ ಸಾಕಾನೆಗಳ ಕಾದಾಟ ವಿಕೋಪಕ್ಕೆ ತಿರುಗಿದೆ. ಈ ವೇಳೆ ಮಾರ್ತಾಂಡ ಮಹಿಳೆಯ ಮೇಲೆ ಬಿದ್ದಿದೆ. ಆನೆ ಬಿದ್ದ ಪರಿಣಾಮ, ಜಿನ್ಮು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತಿ ಜೋಯಲ್‌ಗೆ ಗಂಭೀರ ಗಾಯಗಳಾಗಿವೆ. ಉಳಿದ ಪ್ರವಾಸಿಗರು ಜೋಯಲ್ ಅವರನ್ನು ಕುಶಾಲನಗರ ಸರ್ಕಾರಿ ಅಸ್ಪತ್ರೆಗೆ ದಾಖಲಿಸಿದ್ದಾರೆ. ಆನೆಗಳ ಕಾದಾಟದಿಂದ ದುಬಾರೆ ಸಾಕಾನೆ ಶಿಬಿರಕ್ಕೆ ಅಗಮಿಸಿದ ಪ್ರವಾಸಿಗರು ಬೆಚ್ಚಿಬಿದ್ದಿದ್ದಾರೆ.

ಘಟನೆಯ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಇದು ಅತ್ಯಂತ ಆಘಾತಕರ ಘಟನೆ, ಆನೆಗಳನ್ನು ಸ್ನಾನ ಮಾಡಿಸುವಾಗ ತಮಿಳುನಾಡಿನ ಪ್ರವಾಸಿ ಮಹಿಳೆ ತುಳಸಿ (33) ನದಿಯ ಬಳಿ ನಿಂತು ನೋಡುತ್ತಿದ್ದರು. ಈ ವೇಳೆ ಆನೆಗಳ ನಡುವೆ ಕಾದಾಟ ಶುರುವಾಗಿದ್ದು, ಆಯತಪ್ಪಿ ಆನೆಯ ಕೆಳಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಸಾಕಾನೆಗಳಾದ ಕಂಜನ್ ಮತ್ತು ಮಾರ್ತಾಂಡ ಸ್ನಾನ ಮಾಡಿಸುತ್ತಿದ್ದ ವೇಳೆ ಪರಸ್ಪರ ಕಾದಾಟ ನಡೆಸಿದ್ದು, ಮಾವುತರು ನಿಯಂತ್ರಿಸುತ್ತಿದ್ದರೂ ಮುನ್ನುಗ್ಗಿದ ಕಂಜನ್ ಆನೆ, ಮಾರ್ತಾಂಡ ಆನೆಗೆ ಗುದ್ದಿದೆ. ಮಾರ್ತಾಂಡ ಆಯತಪ್ಪಿ ಕೆಳಗೆ ಬಿದ್ದಿದ್ದು, ಈ ಮಹಿಳೆ ಆನೆಯ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ. ಇದು ಯಾರೂ ಊಹಿಸದಂತಹ ಘಟನೆಯಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಇಂತಹ ಅಚಾತುರ್ಯಗಳು ಆಗದ ರೀತಿಯಲ್ಲಿ ಕ್ರಮ ವಹಿಸಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಆನೆಗಳು ಸೇರಿದಂತೆ ವನ್ಯಜೀವಿಗಳನ್ನು ಎಷ್ಟೇ ಪಳಗಿಸಿದ್ದರೂ, ಪ್ರಾಣಿಗಳ ಸ್ವಭಾವವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟಸಾಧ್ಯವಾಗಿದೆ. ಅವು ಯಾವಾಗ ಯಾವ ರೀತಿ ವರ್ತಿಸುತ್ತವೆ ಎಂದು ಊಹಿಸುವುದು ಕಷ್ಟವಾಗುತ್ತದೆ. ಹೀಗಾಗಿ ಆನೆಗಳ ಸೊಂಡಿಲು ಮುಟ್ಟುವುದು, ಪಕ್ಕದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವುದು, ಪ್ರವಾಸಿಗರಿಗೆ ಆನೆ ಮೈ ತೊಳೆಯಲು ಅವಕಾಶ ನೀಡುವುದು, ಅವರಿಂದ ಬೆಲ್ಲ, ಬಾಳೆಹಣ್ಣು ಇತ್ಯಾದಿ ಆಹಾರ ತಿನ್ನಿಸುವುದನ್ನು ನಿರ್ಬಂಧಿಸಲು ಕ್ರಮ ವಹಿಸುವಂತೆ ಮತ್ತು ವನ್ಯಜೀವಿಗಳಿಂದ ಪ್ರವಾಸಿಗರು ನಿರ್ದಿಷ್ಟ ಅಂತರ ಕಾಯ್ದುಕೊಳ್ಳುವಂತೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಪತಿ ಹಾಗೂ ಮಗುವಿನ ಎದುರೆ ಮಹಿಳೆ ದುರಂತ ಸಾವನ್ನಪ್ಪಿದ್ದು, ಆ ಕುಟುಂಬ ತೀವ್ರ ಆಘಾತಕ್ಕೆ ಒಳಗಾಗಿದೆ. ಪತ್ನಿಯನ್ನು ರಕ್ಷಿಸಲು ಪತಿ ನಡೆಸುತ್ತಿದ್ದ ಪ್ರಯತ್ನ ಮನಕಲಕುವಂತಿದೆ. ನೋವಿನ ನಡುವೆಯೂ ಪತ್ನಿಯ ಅಂಗಾಂಗ ದಾನಕ್ಕೆ ಪತಿ ಮುಂದಾಗಿ ಹೃದಯವೈಶಾಲ್ಯತೆ ಮೆರೆದಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;