ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯ ಅಡಿಯಲ್ಲಿ ರಚಿಸಲಾದ ಜಿಲ್ಲಾ ಜಾಗೃತಿ ಸಮಿತಿಗೆ ಬರಹಗಾರ ಡಿ. ಎಂ ಮಂಜುನಾಥಸ್ವಾಮಿ ಅವರನ್ನು ಚಿಕ್ಕಮಗಳೂರು ಜಿಲ್ಲಾ ಸಂಚಾಲಕರಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ, ಪುಸ್ತಕ ಸಂಸ್ಕೃತಿ ಹಾಗೂ ಓದುಗರ ವಲಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರಾಧಿಕಾರ ಕೈಗೊಂಡಿರುವ ಮನೆಗೊಂದು ಗ್ರಂಥಾಲಯ ಅನುಷ್ಠಾನದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಹತ್ತು ಜನ ಸದಸ್ಯರನ್ನು ಒಳಗೊಂಡ ಜಿಲ್ಲಾ ಸಮಿತಿಯೊಂದನ್ನು ರಚನೆ ಮಾಡಿ ಈ ನೇಮಕ ಮಾಡಲಾಗಿದೆ.
ಡಿ.ಎಂ.ಮಂಜುನಾಥಸ್ವಾಮಿ ಸಂಚಾಲಕರಾಗಿ, ಕೆ ಚಂದ್ರಯ್ಯ. ಡಾ. ಲಕ್ಷಿ್ಮಕಾಂತ್ ಕೆ ಎನ್. ಮಾವಿನಕೆರೆ ದಯಾನಂದ್. ಎಂ ಆರ್ ಪ್ರಕಾಶ್. ದಾದಾಪೀರ್ ತರೀಕೆರೆ. ಸೌಭಾಗ್ಯ ಮಹಾಂತೇಶ್. ಸುಜಾತ ಎಚ್‌ಎಲ್. ನಂದೀಶ್ ಬಂಕೇನಹಳ್ಳಿ. ಸತೀಶ್ ಜೆ ಇವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಸಂಚಾಲಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಚಾಲಕ ಮಂಜುನಾಥಸ್ವಾಮಿ ಅವರು ಕನ್ನಡ ಭಾಷೆ, ಸಾಹಿತ್ಯ ಮತ್ತು ಪುಸ್ತಕ ಓದುವ ಅಭಿರುಚಿಯನ್ನು ಯುವಜನರಲ್ಲಿ ಬೆಳೆಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾಹಿತ್ಯಾಸಕ್ತರು, ಕನ್ನಡ ಪರ ಸಂಘಟನೆಗಳು ಹಾಗೂ ಸ್ನೇಹಿತರು ಇವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.



