dc_page-0001

 

 

ಚಿಕ್ಕಮಗಳೂರು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರನ್ನು ಸರ್ಕಾರ ದಿಢೀರ್ ವರ್ಗಾವಣೆ ಮಾಡಿದೆ.  ನಾಗರಾಜ್ ಅವರ ಬದಲಿಗೆ ಭನ್ವರ್ ಸಿಂಗ್ ಮೀನಾ ಅವರನ್ನು ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದ್ದು, ನಾಗರಾಜ್ ಅವರಿಗೆ ಏಡ್ಸ್ ನಿಯಂತ್ರಣ ಸಂಸ್ಥೆಯಲ್ಲಿ ಹೊಸ ಹೊಣೆ ನೀಡಲಾಗಿದೆ.

ಭನ್ವರ್ ಸಿಂಗ್ ಮೀನಾ

ನಾಗರಾಜ್ ಅವರ ಬದಲಿಗೆ ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಭನ್ವರ್ ಸಿಂಗ್ ಮೀನಾ ಅವರನ್ನು ಚಿಕ್ಕಮಗಳೂರಿನ ನೂತನ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಎನ್‌ಎಂ ನಾಗರಾಜ್ ಅವರ ದಿಢೀರ್‌ ವರ್ಗಾವಣೆಗೆ ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಎಡವಟ್ಟು ಕಾರಣ ಎನ್ನಲಾಗಿದೆ; ಜಿಲ್ಲಾಧಿಕಾರಿಗಳ ವಿರುದ್ಧ ಅಸಮಾಧಾನಗೊಂಡ ಸರ್ಕಾರ ಅವರನ್ನು ಎತ್ತಂಗಡಿ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕರ್ನಾಟಕ ಸರ್ಕಾರ ಮಂಗಳವಾರ ನಾಲ್ಕು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿಯೂ ಒಬ್ಬರು. ಸದ್ಯ ಅವರನ್ನು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಒಂಬುಡ್ಸ್‌ಮನ್ ಆಗಿ ನೇಮಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಕವಾದ 5 ತಿಂಗಳಿಗೆ ಎನ್‌ಎಂ ನಾಗರಾಜ್ ಅವರ ದಿಢೀರ್‌ ವರ್ಗಾವಣೆಯಾಗಿದೆ.

ಹೈಕೋರ್ಟ್ ಆದೇಶದಂತೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ನಡೆದಿತ್ತು. ಆದರೆ, ಹೈಕೋರ್ಟ್ ಆದೇಶವನ್ನು ಜಿಲ್ಲಾಧಿಕಾರಿ ನಾಗರಾಜ್‌ ಅವರು ಸರಿಯಾಗಿ ಅರ್ಥೈಸಿಕೊಂಡಿಲ್ಲ ಮತ್ತು ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರ ನಾಗರಾಜ್ ಮೇಲೆ ಅಸಮಧಾನಗೊಂಡಿತ್ತು ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ಕೂಡ ಮರುಮತಎಣಿಕೆ ಫಲಿತಾಂಶಕ್ಕೆ ತಡೆಯಾಜ್ಞೆ ನೀಡಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿತ್ತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ