marthanda

 

 

ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್ ಮತ್ತು ಮಾರ್ತಾಂಡ ಆನೆಗಳ ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಸೋಮವಾರ ಕಂಜನ್ ಆನೆ ಹಾಗೂ ಮಾರ್ತಾಂಡ ಆನೆ ಕಾದಾಟದಲ್ಲಿ ತಮಿಳುನಾಡು ಮೂಲದ ಮಹಿಳೆಯೊಬ್ಬರು ಬಲಿಯಾಗಿದ್ದರು. ಕಾದಾಟದಲ್ಲಿ ಕಂಜನ್ ಆನೆ ಮಾರ್ತಾಂಡ ಆನೆಯ ಹೊಟ್ಟೆ, ಕಿವಿ ಹಾಗೂ ಇತರೆ ಭಾಗಗಳಿಗೆ ತಿವಿದು  ಗಾಯ ಗೊಳಿಸಿತ್ತು. ತೀವ್ರ ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ದುಬಾರೆ ಸಾಕಾನೆ ಶಿಬಿರದಲ್ಲಿ ಡಾ.ಮುಜಿಭ್ ಹಾಗೂ ಚಿಟ್ಟಿಯಪ್ಪ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮಾರ್ತಾಂಡ ಆನೆ ಮೃತಪಟ್ಟಿದೆ.

ಆನೆಗಳ ಕಾದಾಟದಲ್ಲಿ ಮಹಿಳೆ ಬಲಿ ಪ್ರಕರಣ ಸಂಬಂಧ ದುಬಾರೆ ಸಾಕಾನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಮುಂದಿನ ಆದೇಶದವರೆಗೂ ದುಬಾರೆ ಬಂದ್ ಆಗಲಿದೆ.

ಇತ್ತ ಆಕ್ರಮಣಕಾರಿ ಪ್ರವೃತ್ತಿ ಪ್ರದರ್ಶಿಸುತ್ತಿರುವ ಕಂಜನ್ ಆನೆಯನ್ನು ದಸರಾ ಆನೆಗಳ ತಂಡದಿಂದ ಕೋಕ್ ನೀಡಲಾಗಿದ್ದು, ಈ ಬಗ್ಗೆ ಅರಣ್ಯ ಸಚಿವ ಈಶ್ರರ ಖಂಡ್ರ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ