ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶೆ ಶ್ರೀಮತಿ ಭಾನುಮತಿ ಹಾಗೂ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶ್ರೀಮತಿ ನಂದಿನಿ ಅವರು ವರ್ಗಾವಣೆಗೊಂಡ ಹಿನ್ನೆಲೆ ಬುಧವಾರ ನ್ಯಾಯಾಲಯದಲ್ಲಿ ಚಿಕ್ಕಮಗಳೂರು ವಕೀಲರ ಸಂಘದಿಂದ ಗೌರವಿಸುವ ಮೂಲಕ ಬೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ, ಉಪಾಧ್ಯಕ್ಷ ಕೆ.ಎಸ್.ಶರತ್‍ಚಂದ್ರ, ಕಾರ್ಯದರ್ಶಿ ಅನಿಲ್‍ಕುಮಾರ್, ಖಜಾಂಚಿ ಡಿ.ಬಿ.ದೀಪಕ್, ಮಹಿಳಾ ಖಜಾಂಚಿ ರೀನಾ, ನ್ಯಾಯಾಧೀಶರಾದ ಹನುಮಂತಪ್ಪ, ಕು.ಸುಜಾತ, ದ್ಯಾವಪ್ಪ ಹಾಗೂ ವಕೀಲರು, ಸದಸ್ಯರುಗಳು ಉಪಸ್ಥಿತರಿದ್ದರು.



