suddi-7 (3)

 

 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಆಡಳಿತಕ್ಕೆ ಆದ್ಯತೆ ನೀಡುವುದರ ಜೊತೆಗೆ ಇ-ಆಫೀಸ್ ವ್ಯವಸ್ಥೆಯನ್ನು ಅಧಿಕಗೊಳಿಸುವ ಉದ್ದೇಶ ಹೊಂದಿರುವುದಾಗಿ ನೂತನ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ತಿಳಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರಿಂದ ಬುಧವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಪ್ರವಾಸೋದ್ಯಮದಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇದಲ್ಲದೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬೇರೆ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೂ ಮೊದಲು ಜಿಲ್ಲೆಯ ಹಿರಿಯ ಅಧಿಕಾರಿಗಳ ಸಭೆ ಕರೆದು ಇಲ್ಲಿನ ಎಲ್ಲ ಸಮಸ್ಯೆಗಳು ಹಾಗೂ ಆದ್ಯತೆಗಳ ಬಗ್ಗೆ ಚರ್ಚಿಸಲಾಗುವುದು. ಅನಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಒಳಗೊಂಡಂತೆ ವ್ಯವಸ್ಥಿತ ತಂಡವೊಂದನ್ನು ರಚಿಸಿ ಉತ್ತಮ ಕಾರ್ಯ ಕೈಗೊಳ್ಳುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.

ರಾಜಾಸ್ತಾನ ಮೂಲದವರಾದ ಭನ್ವರ್ ಸಿಂಗ್ ಮೀನಾ 2017ರ ಬ್ಯಾಚ್‍ನ ಐಎಎಸ್ ಅಧಿಕಾರಿ. ಮೊದಲು ಬೆಳಗಾವಿಯಲ್ಲಿ  ಕಾರ್ಯ ನಿರ್ವಹಿಸಿದ್ದಾರೆ. ಬಸವಕಲ್ಯಾಣದಲ್ಲಿ ಉಪವಿಭಾಗಾಧಿಕಾರಿಯಾಗಿ, ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ, ಕಲ್ಬುರ್ಗಿಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಹಾಗೂ ಕೆಪಿಎಸ್‍ಸಿ ಪರೀಕ್ಷಾ ನಿಯಂತ್ರಣಾಧಿಕಾರಿ ಮತ್ತು ಬಾಗಲಕೋಟೆಯಲ್ಲಿ ಜಿಎಂಯುಕೆಪಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದವರು.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ