petrol

 

 

ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ   ಏರಿಕೆ ಮಾಡಲಾಗಿದೆ.   ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.

ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 110.89 ರೂ. ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 98.80 ರೂ. ಆಗಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆ ಮೇ 15ರಿಂದ ಈಚೆಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರವನ್ನು ಹೆಚ್ಚಿಸಿವೆ. 

ಇದಕ್ಕೂ ಮುನ್ನ ಎರಡು ದಿನಗಳ ಹಿಂದೆಯಷ್ಟೇ (ಮೇ 23) ಪೆಟ್ರೋಲ್ ದರವನ್ನು 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಸಿದ್ದು, ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಎರಡೇ ವಾರದಲ್ಲಿ 4ನೇ ಬಾರಿಗೆ ತೈಲ ದರ ಏರಿಕೆ ಮಾಡಲಾಗಿದ್ದು, ವಾಹನ ಸವಾರರು   ಆಕ್ರೋಶ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ