25Mudigere2A

 

 

ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್‍ಗೆ ಅವಕಾಶ ನೀಡುವ ಹಾಗೂ ಕೇಸರಿ ಶಾಲು ನಿಬರ್ಂಧಿಸುವ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕೆಂದು ಹಾಗೂ ಅಕ್ರಮ ಗೋ ಸಾಗಾಟಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಸಿ ಹಿಂದೂ ಜನಜಾಗೃತಿ ವೇದಿಕೆ ಮುಖಂಡರು ಸೋಮವಾರ ತಹಸೀಲ್ದಾರ್ ಎಸ್.ಅಶ್ವಿನಿ ಅವರಿಗೆ ಮನವಿಪತ್ರ ಸಲ್ಲಿಸಿದರು.

ರಾಜ್ಯ ಸರಕಾರ ಶಾಲೆ ಹಾಗೂ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿ, ಕೇಸರಿ ಶಾಲು ಧರಿಸುವುದಕ್ಕೆ ನಿಬರ್ಂಧ ವಿಧಿಸಿರುವುದು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರ ಸಮಾನತೆ, ಧರ್ಮನಿರಪೇಕ್ಷತೆ ಹಾಗೂ ಏಕರೂಪದ ಸಮವಸ್ತ್ರ ನೀತಿಗೆ ವಿರುದ್ಧವಾಗಿದೆ.  2022ರಲ್ಲಿ ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದವು ರಾಜ್ಯದಾದ್ಯಂತ ಉದ್ವಿಗ್ನ ಪರಿಸ್ಥಿತಿಯನ್ನು ನಿರ್ಮಿಸಿತ್ತು ಈ ಪ್ರಕರಣದ ಕುರಿತು ನ್ಯಾಯಾಲಯ  ಶಾಲೆ-ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರವನ್ನು ಪಾಲಿಸಬೇಕೆಂದು ಸೂಚಿಸಿತ್ತು. ಹಿಜಾಬ್ ಪ್ರಕರಣ ಸುಪ್ರಿಂ ಕೋರ್ಟ್‍ನಲ್ಲಿ ಬಾಕಿಯಿದೆ. ಆದರೂ ಸರಕಾರ ಹಿಜಾಬ್‍ಗೆ ಅವಕಾಶ ನೀಡಿ, ಕಾನೂನು ಉಲ್ಲಂಘಿಸಿದೆ.

ಹಿಜಾಬ್‍ಗೆ ಅವಕಾಶ ನೀಡಿದರೆ ಇತರೆ ಸಮುದಾಯದ ವಿದ್ಯಾರ್ಥಿಗಳು ಸಹ ತಮ್ಮ ಧಾರ್ಮಿಕ ಚಿಹ್ನೆಗಳನ್ನು ಪ್ರದರ್ಶಿಸುವ ಸಾಧ್ಯತೆ ಇರುತ್ತದೆ. ಇದರಿಂದ ಶಿಕ್ಷಣದ ಮಹತ್ವ ಕಳೆದುಕೊಳ್ಳುತ್ತದೆ. ಹಾಗಾಗಿ ಹಿಜಾಬ್‍ಗೆ ಅವಕಾಶ ನೀಡಬಾರದು. ಅಲ್ಲದೇ ಗೋ ಕಳ್ಳತನ, ಗೋಮಾಂಸ ಮಾರಾಟ ಹೆಚ್ಚುತ್ತಿದೆ. ಇದಕ್ಕೂ ಕೂಡ ಅಡಿವಾಣ ಹಾಕಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಸಂಜಯ್ ಕೊಟ್ಟಿಗೆಹಾರ, ಬಸವರಾಜ್, ರಘು ಮೂಡಿಗೆರೆ, ಶರತ್ ಮಾಕೋನಹಳ್ಳಿ, ಧರ್ಮರಾಜ್ ಬಿನ್ನಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ