25Mudigere1A (1)

 

 

ಹೊರ ಗುತ್ತಿಗೆದಾರರ ಕನಿಷ್ಟವೇತನ ನೀಡಲು ಸರಕಾರ ನಿರ್ಧರಿಸಿದೆ. ಅದನ್ನು ಶೀಘ್ರದಲ್ಲೇ ಜಾರಿಗೊಳಿಸಬೇಕೆಂದು ಸರಕಾರಿ ಹೊರ ಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಧ್ಯಕ್ಷ ಎಲ್.ಮಂಜುನಾಥ್ ಮನವಿ ಮಾಡಿದರು.

ಅವರು ಭಾನುವಾರ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಸರಕಾರಿ ಹೊರ ಗುತ್ತಿಗೆ ನೌಕರರ ಸಂಘದಿಂದ ಏರ್ಪಡಿಸಿದ್ದ ಹೊರ ಗುತ್ತಿಗೆದಾರರ ಕುಂದುಕೊರತೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾನ ವೇತನವಿಲ್ಲದೇ ಕಡಿಮೆ ವೇತನದ ಜತೆಗೆ ಉದ್ಯೋಗ ಭದ್ರತೆ ಇಲ್ಲ. ಸಮಯಕ್ಕೆ ವೇತನ ಸಿಗುತ್ತಿಲ್ಲ. ಪಿಎಫ್, ಇಎಸ್‍ಐ ವೈದ್ಯಕೀಯ ಸೌಲಭ್ಯ, ರಜೆ ಮುಂತಾದ ಹಕ್ಕುಗಳು ಸಿಗುತ್ತಿಲ್ಲ. ಭವಿಷ್ಯದ ಭದ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೇ ಸಂಕಷ್ಟದಲ್ಲಿ ಕೆಲಸ ಮಾಡುವ ಸ್ಥಿತಿ ಉಂಟಗಿದೆ. ಮೂಡಿಗೆರೆ ತಾಲೂಕಿನ ದಿನೇಶ್ ಎಂಬುವರು ಚಿಕ್ಕಮಗಳೂರು ಮೀನುಗಾರಿಕೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಕಾರಣ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅವರನ್ನು ಕೆಲಸದಿಂದ ತೆಗೆಯಲಾಗಿದೆ. ಇದರಿಂದ ಅವರ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಅವರನ್ನು ಮತ್ತೆ ಕೆಲಸಕ್ಕೆ ನೇಮಿಸಬೇಕೆಂದು ಒತ್ತಾಯಿಸಿದರು.

ಬಳಿಕ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಹೊರ ಗುತ್ತಿಗೆದಾರರ ಸರಕಾರದ ಹಾಗೂ ಇಲಾಖೆಗಳ ಆಧಾರ ಸ್ತಂಭವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಒತ್ತಡದಿಂದ ಕೆಲಸ ಮಾಡುತ್ತಿದ್ದಾರೆ. ಇದರಿಂದ ನನಗೆ ಹೊರ ಗುತ್ತಿಗೆದಾರರ ಮೇಲೆ ಅತಿಯಾದ ಕಾಳಜಿ ಇದೆ. ಸರಕಾರ ಕನಿಷ್ಟವೇತನ ಜಾರಿ ಮಾಡಲು ಕ್ಯಾಬಿನೆಟ್‍ನಲ್ಲಿ ಪಾಸಾದಮೇಲೆ ಅದು ಕಾರ್ಯರೂಪಕ್ಕೆ ಬಂದೇ ಬರುತ್ತದೆ. ಜತೆಗೆ ಹೊರ ಗುತ್ತಿಗೆದಾರರಿಗೆ ಮೂಲ ಸೌಕರ್ಯ ಒದಗಿಸಲು ಸರಕಾರದ ಗಮನ ಸೆಳೆಯುತ್ತೇನೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಹೊರ ಗುತ್ತಿಗೆ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಬಿ.ಎಲ್.ಶೈಲಾ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷ ಗಿರೀಶ್, ಗೌರವಾಧ್ಯಕ್ಷ ಮಣಿಕುಮಾರ್, ಕಳಸ ಘಟಕದ ಉಪಾಧ್ಯಕ್ಷ ಮಣಿಕಂಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್, ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್, ಕಾರ್ಯದರ್ಶಿ ಭಾರ್ಗವಿ, ಜೀವಿತಾ, ರಘು, ಕಲಾ ರವಿ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ