ragu js

 

 

ಅಧಿಕಾರದ ಮದದಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರ ದೌರ್ಜನ್ಯವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜೆ.ಎಸ್.ರಘು ತಿಳಿಸಿದ್ದಾರೆ.

ಅವರು ಸೋಮವಾರ ಹೇಳಿಕೆಯಲ್ಲಿ ತಿಳಿಸಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸಿಗರ ಸುಳ್ಳು ಭರವಸೆ ಮತ್ತು ಕುತಂತ್ರದಿಂದ 5 ಶಾಸಕರು ಜಯಗಳಿಸಿದ ಮೇಲೆ ಜಿಲ್ಲೆಯಲ್ಲಿ ತಮ್ಮದೇ ಸಾಮ್ರಾಜ್ಯವೆನ್ನುವಂತೆ ಅಧಿಕಾರ ನಡೆಸುತ್ತಿದ್ದಾರೆ. ಈ ಹಿಂದೆ ಸಿ.ಟಿ.ರವಿ ಹಿಂದೆ ಶಾಸಕರಾಗಿದ್ದ ಸಂದರ್ಭದಲ್ಲಿ 5.5 ಸಾವಿರ ಕೋಟಿ ಅನುದಾನ ತಂದು ಕಾಮಗಾರಿ ಪ್ರಾರಂಭಿಸಿದ್ದರು. ಕಾಂಗ್ರೆಸ್ ಶಾಸಕರ ಆಯ್ಕೆಯಾದ ಬಳಿಕ ಕಾಮಗಾರಿ ಹೆಸರು ಮತ್ತು ಸ್ಥಳ ಬದಲಾವಣೆ ಮಾಡಿ, ತಾವೇ ಅನುದಾನ ತಂದಿದ್ದು ಎಂದು ಸುಳ್ಳು ಹೇಳುತ್ತಿದ್ದಾರೆ. ಅಲ್ಲದೇ ತನ್ನ ಸಹಚರರಿಗೆ ಕಾಮಗಾರಿ ಹಂಚಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ಈ ಕಾಮಗಾರಿಗಳನ್ನು ಎಂಎಲ್‍ಸಿ ಸಿ.ಟಿ.ರವಿ ಅವರು ವೀಕ್ಷಣೆಗೆ ತೆರಳಿದಾಗ, ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಲ್ಲದೇ ಪೊಲೀಸರನ್ನು ಬಳಸಿಕೊಂಡು ಕೇಸು ದಾಖಲಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಶೃಂಗೇರಿಯಲ್ಲಿ ವಿಧಾನಸಭೆ ಕ್ಷೇತ್ರದ ಮರುಎಣಿಕೆಯಲ್ಲಿ ಬಿಜೆಪಿ ಗೆದ್ದಿರುವುದು ಜಗತ್‍ಜಾಹಿರಾಗಿದ್ದಲ್ಲದೇ ಅವರ ಕೂಡ ಬಯಲಾಗಿದೆ.  ಸೋಲನ್ನು  ಒಪ್ಪಿಕೊಳ್ಳದೇ ನ್ಯಾಯಾಲಯಕ್ಕೆ  ಹೋಗಿ ತಡೆ ತಂದುಕೊಂಡಿದ್ದಾರೆ. ಅವರದ್ದೇ ಸರಕಾರ ಇದ್ದರೂ ಅಧಿಕಾರಿಗಳು ಬಿಜೆಪಿ ಪರವಾಗಿ ಕೆಲಸ ಮಾಡಿದ್ದಾರೆಂದು ಜನರ ದಾರಿ ತಪ್ಪಿಸುತ್ತಿರುವುದು ನಾಚಿಗೇಡಿನ ಸಂಗತಿ. ರಾಜ್ಯದಲ್ಲಿ ಕಾಂಗ್ರಸ್ ಕಾರ್ಯಕರ್ತರ ದೌರ್ಜನ್ಯ ಮಿತಿ ಮೀರುತ್ತಿದೆ. ಇದು  ಕಾಂಗ್ರೆಸ್‍ನ ಅವನತಿ ಪುಷ್ಟಿ ಸಿಗುತ್ತಿದ್ದು,  ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದು ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸಲಿದ್ದಾರೆಂದು ಹೇಳಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ