ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಯಾಗಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಸಿದ್ದರಾಮಯ್ಯ ಸಿಎಲ್‌ಪಿ ನಾಯಕನಾಗಿ ಡಿಕೆಶಿ ಹೆಸರನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು. ಅದಕ್ಕೆ ಜಿ.ಪರಮೇಶ್ವರ್ ಅವರು ಅನುಮೋದಿಸಿದರು. ಕೊನೆಗೆ ಡಿಕೆಶಿ ಆಯ್ಕೆಗೆ ಶಾಸಕರು ಕೂಡ ಕೈ ಎತ್ತುವ ಮೂಲಕ ಅನುಮೋದನೆ ನೀಡಿದರು. ಜೊತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಿಸಿದರು. ಸಿದ್ದರಾಮಯ್ಯ ಘೋಷಣೆಗೆ ಪರಮೇಶ್ವರ್ ಅನುಮೋದನೆ ನೀಡಿದರು. ಎಐಸಿಸಿ ಆದೇಶದ ಮೇರೆಗೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪೂರ್ಣಗೊಂಡಿತು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆಶಿ ಆಯ್ಕೆ ಸುಸೂತ್ರವಾಗಿ ನಡೆಯಿತು. ಸಭೆಯ ಮೇಲ್ವಿಚಾರಣೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ವಹಿಸಿದ್ದರು.
ಡಿ.ಕೆ.ಶಿವಕುಮಾರ್ ನಾಯಕರ ಜೊತೆಗೂಡಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಜೂನ್ 3 ರಂದು ಬುಧವಾರ ಡಿ ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.



