2Mudigere1A

 

 

ಮೂಗ್ತಿಹಳ್ಳಿ-ಮೂಡಿಗೆರೆ ರಸ್ತೆ ಅಭಿವೃದ್ಧಿ : ಆರಂಭವಾಗದ ಕಾಮಗಾರಿ, ಶೀಘ್ರ ಚಾಲನೆ ನೀಡದಿದ್ದರೆ ಪ್ರತಿಭಟನೆ : ರೈತ ಮುಖಂಡರ ಎಚ್ಚರಿಕೆ

ಚಿಕ್ಕಮಗಳೂರು ಮೂಗ್ತಿಹಳ್ಳಿಯಿಂದ ಮೂಡಿಗೆರೆ ಹ್ಯಾಂಡ್‍ ಪೋಸ್ಟ್ ವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಅನುದಾನ ಮಂಜೂರಾಗಿ ಎರಡು ವರ್ಷ ಕಳೆದರು ಕಾಮಗಾರಿ ಆರಂಭಿಸದೇ ಕಾಲಹರಣ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಸಂಚಾಲಕ ಡಿ.ಎಸ್.ರಮೇಶ್ ದೂರಿದರು.

ಅವರು ಮಂಗಳವಾರ ಮೂಡಿಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ರಸ್ತೆ ಕಾಮಗಾರಿಗೆ ಹಿಂದಿನ ಸಂಸದರ ಅವಧಿಯಲ್ಲೇ ಹಣ ಮಂಜೂರಾಗಿ ಅನುಮೋದನೆ ದೊರೆತಿದೆ. ಆದರೆ ವರ್ಷ ಎರಡು ಕಳೆದರು ಕಾಮಗಾರಿ ಪ್ರಾರಂಭವಾಗುವ ಮುನ್ಸೂಚನೆ ಸಿಗುತ್ತಿಲ್ಲ. ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಕಾಮಗಾರಿ ಪ್ರಾರಂಭಿಸದೇ ಕಾಲಾಹರಣ ಮಾಡಲಾಗುತ್ತಿದೆ. ರಸ್ತೆ ಅಗಲೀಕರಣ ಪೂರ್ಣಗೊಂಡರೆ ಸುಗಮ ಸಂಚಾರದ ಜತೆಗೆ ಪ್ರವಾಸೋದ್ಯಮ ಹಾಗೂ ವ್ಯಾಪಾರ ಚಟುವಟಿಕೆಗಳಿಗೂ ಉತ್ತೇಜನ ಸಿಗಲಿದೆ. ಆದರೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಶೀಘ್ರದಲ್ಲೇ ರಸ್ತೆ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಹೇಳುತ್ತಿದ್ದಾರೆಯೇ ಹೊರತು, ಅದು ಕಾರ್ಯರೂಪಕ್ಕೆ ಬರುತ್ತಿಲ್ಲ. ಮಳೆಗಾಲವೆಂದು ಕಾರಣ ಕೊಡದೇ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸುವ ಮೂಲಕ ಅಗಲೀಕರಣಕ್ಕೆ ಮುಂದಾಗಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಲೂಕು ಅಧ್ಯಕ್ಷ ಎಸ್.ಪಿ.ರಾಜು ಮಾತನಾಡಿ, ಕಳೆದ ಬಾರಿ ರೈತರು ಸಾಲ ಮಾಡಿ ಬೆಳೆ ವಿಮೆ ಪಡೆಯಲು ಹಣ ಕಟ್ಟಿದ್ದರು. ಆದರೆ ಅತಿವೃಷ್ಟಿಯಿಂದ ಬೆಳೆ ನಷ್ಟವಾದಾಗ ರೈತರು ಸರಿಯಾದ ದಾಖಲೆ ನೀಡಿಲ್ಲ. ಬೆಳೆ ಮಾಪನಗಳು ಹಾಳಾಗಿದೆ ಎಂದು ಕಾರಣ ನೀಡಿ, ಬೆಳೆ ವಿಮೆ ಸಿಗದಂತಾಗಿತ್ತು. ಆ ಹಣ ಎಲ್ಲಿ ಹೋಗಿದೆ? ಗ್ಯಾರಂಟಿಗೇನಾದರೂ ಬಳಸಿಕೊಂಡರೇ ಎಂಬ ಸಂಶಯ ಮೂಡಿದೆ. ಇದು ಮತ್ತೆ ಮರುಕಳಿಸಬಾರದು. ಈಗ ಮಳೆ ಪ್ರಾರಂಭಗೊಳ್ಳುವ ಸಮಯ. ಜಿಲ್ಲೆಯಲ್ಲಿರುವ ಎಲ್ಲಾ ಬೆಳೆ ಮಾಪನಗಳನ್ನು ಕೂಡಲೇ ಸರಿಪಡಿಸಬೇಕು. ಸುಖಾ ಸುಮ್ಮನೆ ಬಳೆ ವಿಮೆ ಕಟ್ಟಬೇಕೆಂದು ಪ್ರಕಟಣೆ ಹೊರಡಿಸಬಾರದೆಂದು ಹೇಳಿದರು.

ಜಿಲ್ಲಾ ಸಂಚಾಲಕ ಪಿ.ಕೆ.ನಾಗೇಶ್‍ಗೌಡ, ಮೆಸ್ಕಾಂನವರು ರಸ್ತೆ ಬದಿಯಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಿದ್ದರಿಂದ ವಾಹನಗಳು ಡಿಕ್ಕಿ ಹೊಡೆದಾಗ, ವಾಹನ ಮಾಲೀಕರಿಂದ ಸುಮಾರು 15 ಸಾವಿರ ರೂ ದಂಡ ವಿಧಿಸುತ್ತಿದ್ದಾರೆ. ವಿದ್ಯುತ್ ಸ್ಪರ್ಷದಿಂದ ಸಾವಿಗೀಡಾಗುವ ರೈತರಿಗೆ ಪರಿಹಾರ ನೀಡುತ್ತಿಲ್ಲ. ಮಳೆ ಸಂಪೂರ್ಣವಾಗಿ ಪ್ರಾರಂಭಗೊಳ್ಳುವ ಮುನ್ನ  ಜಂಗಲ್ ಕಟ್ ಮಾಡಬೇಕು. ರಸ್ತೆ ಬದಿಯಲ್ಲಿದ್ದ ಎಲ್ಲಾ ವಿದ್ಯುತ್ ಕಂಬಗಳನ್ನು ರಸ್ತೆ ಹಾಗೂ ಚರಂಡಿಯಾಚೆಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಸಂಚಾಲಕ ಪಿ.ಕೆ.ನಾಗೇಶ್, ಚಿಕ್ಕಮಗಳೂರು ತಾಲೂಕು ಅಧ್ಯಕ್ಷ ತುಳಸೇಗೌಡ, ಕಸಾಪ ತಾಲೂಕು ಅಧ್ಯಕ್ಷ ಡಿ.ಕೆ.ಲಕ್ಷ್ಮಣ್‍ಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ