d.k.shivakumar

 

 

ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಐದು ಹೊಸ ಘೋಷಣೆಗಳನ್ನು ಮಾಡಿದ್ದಾರೆ.

ಬುಧವಾರ ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಹೊಸ ಯುಗ ಆರಂಭಿಸಲು, ನಾವು ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದರು.

ಉಚಿತ ಬಸ್ ಪಾಸ್

ರಾಜ್ಯದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಇದಕ್ಕಾಗಿ ಸಂಬಂಧಪಟ್ಟ ಅರ್ಜಿ ವಿತರಣೆಯ ಬಗ್ಗೆ ಸಾರಿಗೆ ಇಲಾಖೆಯು ಸದ್ಯದಲ್ಲಿಯೇ ಕ್ರಮ ಕೈಗೊಳ್ಳಲಿದೆ ಎಂದರು.

ಭಾರತ್ ಜೋಡೋ ಯುವ ಸಂಘಕ್ಕೆ 10 ಲಕ್ಷ

ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ‘ಭಾರತ್ ಜೋಡೋ ಯುವಕ ಸಂಘ’ ರಚನೆ ಮಾಡುವ ಚಿಂತನೆ ಇದೆ ಎಂದು ಸಿಎಂ ಡಿ.ಕೆ. ಶಿವಕುಮಾರ್​ ಹೇಳಿದರು.

ಸಂಘದಲ್ಲಿ ಕನಿಷ್ಠ 150 ರಿಂದ 200 ಜನರಿರುತ್ತಾರೆ. ರಾಜ್ಯಾದ್ಯಂತ ಒಟ್ಟು 10 ಸಾವಿರ ಯುವಕರ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದ್ದು, ಪ್ರತಿ ಸಂಘಕ್ಕೆ ಸರ್ಕಾರದಿಂದ 10 ಲಕ್ಷ ರೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

56,000 ಹುದ್ದೆಗಳ ಭರ್ತಿ

ರಾಜ್ಯದಲ್ಲಿ ಉದ್ಯೋಗದ ಸಮಸ್ಯೆಯನ್ನು ನೀಗಿಸುವ ದಿಸೆಯಲ್ಲಿ ಸರ್ಕಾರ, ಈಗಾಗಲೇ 56,000 ಹುದ್ದೆಗಳನ್ನು ಭರ್ತಿಗೊಳಿಸುವ ನಿರ್ಣಯವನ್ನು ಕೈಗೊಂಡಿದೆ. ಖಾಸಗಿ ರಂಗದಲ್ಲಿ ಉದ್ಯೋಗ ಬಯಸುವ ಯುವಜನರಿಗೆ ಹಾಗೂ ಖಾಸಗಿ ಕಂಪನಿಗಳ ಉದ್ಯೋಗದ ಬೇಡಿಕೆಗಳ ನಡುವೆ ಸಂಪರ್ಕ ಕಲ್ಪಿಸುವ ‘ಯುವ ಉದ್ಯೋಗ ಸೇತು’ ವ್ಯವಸ್ಥೆಯನ್ನು ರೂಪಿಸಲು ನಿರ್ಣಯಿಸಲಾಗಿದೆ.

ಈ ಸೌಲಭ್ಯ ಕೇಂದ್ರದಲ್ಲಿ ಕಂಪನಿಗಳಿಗೆ ಅಗತ್ಯವಿರುವ ತರಬೇತಿಯನ್ನೂ ನೀಡಿ, ಅಲ್ಲಿನ ಅಭ್ಯರ್ಥಿಗಳನ್ನು ಕಂಪನಿಗಳಿಗೆ ಆಯ್ಕೆ ಮಾಡಲಾಗುವುದು. ಕರ್ನಾಟಕದವರಿಗೆ, ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಪಾಲು ನೀಡಲಾಗುವುದು. ಕನ್ನಡಿಗರಿಗೆ ನೀಡಬೇಕಾದ ಉದ್ಯೋಗದ ಶೇಕಡಾವಾರನ್ನು ಕಂಪನಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು. ತಿಂಗಳೊಳಗೆ ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು. ಎಲ್ಲವೂ ಆನ್ ಲೈನ್ ಮೂಲಕ ಲಭ್ಯವಾಗಲಿದೆ ಎಂದು ಡಿಕೆಶಿ ತಿಳಿಸಿದರು.

ಬಿ ಖಾತಾಯಿಂದ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ

ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಅನಧಿಕೃತ ಕಟ್ಟಡಗಳಿಗೆ ಎ-ಖಾತಾ ದಾಖಲೆ ನೀಡುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದರು.

ಬೆಂಗಳೂರಿನ ರಸ್ತೆಗಳನ್ನು ಉತ್ತಮಪಡಿಸಲು 2000 ಕೋಟಿ ರೂ

ನಗರ ಮೂಲಸೌಕರ್ಯವನ್ನು ಉತ್ತಮಗೊಳಿಸಲು, ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ಹೊರತುಪಡಿಸಿ ಜಿಬಿಎ, ಬಿಡಿಎ ವ್ಯಾಪ್ತಿ ಸೇರಿ ಕೇವಲ ರಸ್ತೆಗಳನ್ನು ಉತ್ತಮಪಡಿಸಲು 2000 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದರು.

ವಸತಿ ಕಟ್ಟಡಗಳಿಗೆ ಒಸಿ

ಬೆಂಗಳೂರು ನಗರದಲ್ಲಿ ವಿದ್ಯುತ್ ಸಮಸ್ಯೆ ಇದ್ದು, 2500 ಚದರ ಅಡಿ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಒಸಿ (OC) ಮತ್ತು ಸಿಸಿ (CC) ಪಡೆಯುವುದರಿಂದ ಒಂದು ಬಾರಿ ಮಾತ್ರ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ