ಪೋಷಕರು ತಮ್ಮ ಮಕ್ಕಳಿಗೆ ಹಣ, ಐಶ್ವರ್ಯ, ಅಂತಸ್ತು ಮಾಡದೇ ಶಿಕ್ಷಣವನ್ನು ಕೊಡಿಸಿದಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಭರತ್ ಹೇಳಿದರು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಚಿಕ್ಕಮಗಳೂರು ನಗರದ ಉಪ್ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ನನ್ನ ಶಾಲೆ ನನ್ನ ಹಕ್ಕು ಎಂಬ ಧ್ಯೇಯ ವಾಕ್ಯದಡಿಯಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸ್ವತಂತ್ರ ಪೂರ್ವದಲ್ಲಿ ಸ್ವಾತಂತ್ರ್ಯ ಚಳುವಳಿ ಹೋರಾಟಗಳಲ್ಲಿ ಭಾಗಿಯಾದವರು ದೇಶ, ರಾಜ್ಯವನ್ನು ಆಳಿದ ಬಹುತೇಕರು ಇತಿಹಾಸದ ಪುಟಗಳಲ್ಲಿ ಸೇರ್ಪಡೆಯಾಗಿರುವವರು ಕೂಡ ಸರ್ಕಾರಿ ಶಾಲೆಯಲ್ಲಿ ಓದಿದವರು ಎಂದು ತಿಳಿಸಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯೆ ಕುಸುಮ ಭರತ್ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ತಮ್ಮ ಪೆÇೀಷಕರು ತಮ್ಮ ಮೇಲೆ ಅಪಾರವಾದ ಕನಸನ್ನು ಕಟ್ಟಿಕೊಂಡಿರುತ್ತಾರೆ. ಅವರ ಕನಸಿಗೆ ಮಸಿ ಬಳಿಯಬಾರದು ಎಂದು ಹೇಳಿದರು.
ಕಲ್ಲನ್ನು ಕೆತ್ತಿ ಒಂದು ಶಿಕ್ಷೆಯನ್ನು ತಯಾರು ಮಾಡಲು ಹೊರಟಿರುವ ಶಿಕ್ಷಕರಿಗೆ ಹಾಗೂ ಹಿರಿಯ, ಕಿರಿಯರಿಗೆ ಗೌರವವನ್ನು ಕೊಡುವುದನ್ನು ಕಲಿಯಬೇಕು. ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯರನ್ನು ಸ್ಮರಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಸೋಮಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕಿ ಪ್ರಪುಲ್ಲ ಡಿಸೋಜಾ ನಿರೂಪಿಸಿ, ಶಶಿಕಲಾ ವಂದಿಸಿದರು.



