05ktg1

 

 

ವಿದ್ಯಾರ್ಥಿಗಳು, ಯುವ ಸಮೂಹ ಹೆಚ್ಚು ಹೆಚ್ಚು ಪರಿಸರ ಪೂರಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ವನ್ಯಜೀವಿ ಛಾಯಾಗ್ರಾಹಕ ಹೆಚ್.ಎಸ್.ಶಿವಕುಮಾರ್ ಹಿರೇಗೌಜ ಹೇಳಿದರು.

ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಪರಿಸರ ದಿನಾಚರಣೆ ಹಿನ್ನಲೆಯಲ್ಲಿ ಆಯೋಜಿಸಿದ್ದ ಪರಿಸರ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತೇಜಸ್ವಿ ಪ್ರತಿಷ್ಠಾನದಲ್ಲಿ ಪರಿಸರ ವಸ್ತು ಪ್ರದರ್ಶನ ಹಮ್ಮಿಕೊಳ್ಳುವ ಮೂಲಕ ಪರಿಸರದಲ್ಲಿ ನಾವು ಕಳೆದುಕೊಂಡಿರುವ ಅನೇಕ ವೈವಿಧ್ಯತೆಯನ್ನು ನೆನಪಿಸಿಕೊಳ್ಳುವಂತೇ ಮಾಡಿದ್ದಾರೆ. ಪರಿಸರ ದಿನ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿದಿನವೂ ಪರಿಸರದಿನವಾಗಲಿ. ತೇಜಸ್ವಿ ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ತಮ್ಮ ಕೃತಿಗಳ ಮೂಲಕ ತಿಳಿಸಿದ್ದಾರೆ. ವಿದ್ಯಾರ್ಥಿಗಳು ತೇಜಸ್ವಿ ಅವರ ಕೃತಿಗಳನ್ನು ಓದುವ ಮೂಲಕ ಪರಿಸರಪ್ರಜ್ಞೆಯನ್ನು ಬೆಳೆಸಿಕೊಳ್ಳಬಹುದು ಎಂದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ  ಡಾ.ಸಿ ರಮೇಶ್ ಮಾತನಾಡಿ, ಪರಿಸರವನ್ನು ಸಂರಕ್ಷಿಸುವುದು ಮೊದಲ ಆದ್ಯತೆಯಾಗಬೇಕು. ಪರಿಸರಕ್ಕೆ ಸಂಬಂಧಿಸಿದ ಅಂಚೆ ಚೀಟಿ. ಲಕೋಟೆ, ನಾಣ್ಯ ಮತ್ತು ನೋಟುಗಳನ್ನು ಈ ಪ್ರದರ್ಶನದಲ್ಲಿ ವೀಕ್ಷಿಸುವ ಮೂಲಕ ಪರಿಸರ ಸಂರಕ್ಷಣೆಯ ಅಗತ್ಯತೆಯನ್ನು ಮನಗಾಣಬಹುದಾಗಿದೆ. ತೇಜಸ್ವಿ ಪ್ರತಿಷ್ಠಾನವೂ ವಿಶೇಷವಾಗಿ ಪರಿಸರಕ್ಕೆ ಪೂರಕವಾದ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಸ್ತು ಸಂಗ್ರಹಕಾರರಾದ ಎಂ.ಎಲ್ ಅಶೋಕ್ ಮೂಡಿಗೆರೆ, ಕಲಾವಿದರಾದ ಸುರೇಶ್ ಚಂದ್ರ ದತ್ತ, ವಿಜ್ಞಾನಿಗಳಾದ ಡಾ.ಸುಚಿತ್ರಕುಮಾರಿ, ಸಾಮಾಜಿಕ ಕಾರ್ಯಕರ್ತ ಸಂಜಯಗೌಡ ಕೊಟ್ಟಿಗೆಹಾರ, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿಗಳಾದ ಸತೀಶ್ ತರುವೆ, ಸಂಗೀತಾ ತರುವೆ ತೋಟಗಾರಿಕಾ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ