ಮುಂಗಾರು ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್, ಬಾಳೂರು, ಮಧುಗುಂಡಿ ಗ್ರಾಮಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಭೇಟಿ ನೀಡಿ ಮುಂಜಾಗೃತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಮುಂಗಾರು ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವ ಕುರಿತು ಅರಣ್ಯ, ಕಂದಾಯ, ಪೊಲೀಸ್ ಮುಂತಾದ ಇಲಾಖೆಗಳ ಅಧಿಕಾರಗಳ ಜೊತೆ ಚರ್ಚೆ ನಡೆಸಿದರು. ಚಾರ್ಮಾಡಿ ಘಾಟ್ ಹೆದ್ದಾರಿ, ತಡೆಗೋಡೆ ಮುಂತಾದವುಗಳನ್ನು ವೀಕ್ಷಿಸಿದರು. ನೆರೆಪ್ರವಾಹ ಪೀಡಿತ ಪ್ರದೇಶಗಳಾದ ಬಾಳೂರು ಮಧುಗುಂಡಿ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಸ್ಥಳೀಯ ಅಧಿಕಾರ ಬಳಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪವಲಯ ಅರಣ್ಯಾಧಿಕಾರಿ ರಂಜಿತ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಚನ್ನಕೇಶವ, ಅಭಿಯಂತರರಾಧ ಚನ್ನಯ್ಯ, ಮಂಜುನಾಥ್, ಹೆದ್ದಾರಿ ಪ್ರಾಧಿಕಾರದ ಅಭಿಯಂತರರಾದ ಶಶಿಕುಮಾರ್, ವಿಘ್ನೇಶ್, ವೃತ್ತನಿರೀಕ್ಷಕ ರಾಜಶೇಖರ್, ರಾಜಸ್ವ ನಿರೀಕ್ಷಕ ಮಂಜುನಾಥ್, ಬಾಬು, ಗ್ರಾಮ ಲೆಕ್ಕಾಧಿಕಾರಿಗಳಾದ ಮಹೇಶ್, ಸಾಮಾಜಿಕ ಕಾರ್ಯಕರ್ತ ಸಂಜಯಗೌಡ ಕೊಟ್ಟಿಗೆಹಾರ ಮುಂತಾದವರು ಇದ್ದರು.



