ಮೂಡಿಗೆರೆ ತಾಲ್ಲೂಕು ಜೇನುಬೈಲ್ ಗ್ರಾಮದ ನಿವಾಸಿ ಮಾಜಿ ಸೈನಿಕ ಜೆ.ಪಿ. ರಮೇಶ್ ಗೌಡ (68 ವರ್ಷ) ನಿಧನರಾಗಿದ್ದಾರೆ.
ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರ ಅಂತ್ಯ ಸಂಸ್ಕಾರವನ್ನು ಇಂದು ಮಂಗಳವಾರ ಸಂಜೆ 4 ಗಂಟೆಗೆ ಜೇನುಬೈಲು ಗ್ರಾಮದಲ್ಲಿ ನೆರವೇರಿಸಲಾಗುತ್ತದೆ.
ರಮೇಶ್ ಗೌಡ ಅವರು ಭಾರತೀಯ ಸೇನೆಯಲ್ಲಿ ಯೋಧರಾಗಿ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ನಿವೃತ್ತಿಯ ನಂತರ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ರಮೇಶ್ ಅವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ರಮೇಶ್ ಗೌಡ ಅವರ ನಿಧನಕ್ಕೆ ಮೂಡಿಗೆರೆ ನಿವೃತ್ತ ಯೋಧರ ಸಂಘ, ಮೂಡಿಗೆರೆ ಕೆಂಪೆಗೌಡ ಒಕ್ಕಲಿಗರ ವೇದಿಕೆ, ಕರ್ನಾಟಕ ಬೆಳೆಗಾರರ ಒಕ್ಕೂಟ, ಮೂಡಿಗೆರೆ ಬೆಳೆಗಾರರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ತಮ್ಮ ಸಂತಾಪ ಸೂಚಿಸಿದ್ದಾರೆ.



