police

 

 

ಖಾಲಿ ಇರುವ ಒಟ್ಟು 3,991 ಪೊಲೀಸ್ ಕಾನ್‌ಸ್ಟೇಬಲ್(Police Constable) ಸಿವಿಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 10ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ(KEA) ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್ಸಿ-ಎ, ಎಸ್ಸಿ-ಬಿ ಮತ್ತು ಎಸ್ಸಿ-ಸಿ ಜಾತಿ ಪ್ರಮಾಣ ಪತ್ರಗಳ RD ಸಂಖ್ಯೆ ನಮೂದಿಸುವುದು ಕಡ್ಡಾಯ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಲ್ಲದೆ, ಗ್ರಾಮೀಣ, ಕನ್ನಡ ಮಾಧ್ಯಮ ವ್ಯಾಸಂಗ ಇತ್ಯಾದಿ ಕ್ಲೇಮ್ ಮಾಡುವವರು ಅಗತ್ಯ ನಮೂನೆಗಳಲ್ಲಿ ಪ್ರಮಾಣ ಪತ್ರಗಳನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗ್ರಾಮೀಣ ಕೋಟಾ ಕ್ಲೇಮ್ ಮಾಡಬಯಸಿದರೆ ಕಡ್ಡಾಯವಾಗಿ ನಾನ್ ಕ್ರೀಮಿಲೇಯರ್ ಸರ್ಟಿಫಿಕೇಟ್ ಹೊಂದಿರಬೇಕು ಎಂದೂ ಅವರು ತಿಳಿಸಿದ್ದಾರೆ.

ಇದಲ್ಲದೆ, ಅರ್ಜಿ ಜತೆ ಅಪ್ ಲೋಡ್ ಮಾಡುವ ಅಭ್ಯರ್ಥಿಗಳ ಭಾವಚಿತ್ರ 50 KB ಒಳಗಿರಬೇಕು. ಒಟ್ಟು ಹುದ್ದೆಗಳಲ್ಲಿ 596 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 3,395 ಹುದ್ದೆಗಳು ಉಳಿಕೆ ಮೂಲಕ ವೃಂದಕ್ಕೆ ಸೇರಿವೆ. ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ