ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಚಿಕ್ಕಮಗಳೂರು ನಗರದ ಹಾಲೇನ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಚಿಕ್ಕಮಗಳೂರು ಹೊರವಲಯದ ಅಲ್ಲಂಪುರ ಸಮೀಪದ ಹಾಲೇನಹಳ್ಳಿಯ ನಿವಾಸಿ ಸುಮ (55) ಮೃತ ಗೃಹಿಣಿ, ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದೆ.
ಲೈಸೆನ್ಸ್ ಹೊಂದಿದ್ದ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಮೃತ ಸುಮ ಪತಿ ಕೋಡುವಳ್ಳಿ ರಾಜೇಶ್ ಕಾಫಿ ಬೆಳೆಗಾರರಾಗಿದ್ದಾರೆ., ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಮಹಿಳೆ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ಆದರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಬಸವನಹಳ್ಳಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



