suddi-5 (9)

 

 

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷಗಳ ಕಾಲ ಆಡಳಿತ ಪೂರೈಸಿದ ಅಂಗವಾಗಿ ಬುಧವಾರ ಬಿಜೆಪಿ ಚಿಕ್ಕಮಗಳೂರು ನಗರ ಮಂಡಲ ವತಿಯಿಂದ ಕಾರ್ಯಕರ್ತರು ನಗರದ ವಿಜಯಪುರ ಸಮೀಪದ ಜನರಲ್ ಕಾರ್ಯಪ್ಪ ಉದ್ಯಾನವನದಲ್ಲಿ ಬೆಳಿಗ್ಗೆ ಸ್ವಚ್ಚತಾ ಅಭಿಯಾನ ನಡೆಸುವ ಮೂಲಕ ಸಂಭ್ರಮಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‍ಶೆಟ್ಟಿ ಮಾತನಾಡಿ ಕೇಂದ್ರ ಸರ್ಕಾರದ ಯಶಸ್ವಿ 12 ವರ್ಷಗಳ ಆಡಳಿತ ಮತ್ತು ಸಾಧನೆಗಳನ್ನು ಜನರಿಗೆ ತಲುಪಿಸಲು ಭಾರತೀಯ ಜನತಾ ಪಕ್ಷವು ದೇಶಾದ್ಯಂತ ವ್ಯಾಪಕ ಸೇವಾ ಚಟುವಟಿಕೆಗಳು ಮತ್ತು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಪಕ್ಷದ ಕಾರ್ಯಕರ್ತರು ತಮ್ಮ ತಮ್ಮ ಸ್ಥಳೀಯ ಪ್ರದೇಶಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ, ಪರಿಸರ ಸಂರ ಕ್ಷಣೆ ದೃಷ್ಟಿಯಿಂದ ಸಸಿ ನೆಡುವುದು ಹಾಗೂ ಜಿಲ್ಲೆಯಾದ್ಯಂತ ವಿವಿಧ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ನಗರಸಭೆ ಅಧ್ಯಕ್ಷೆ ಶ್ರೀಮತಿ ಭವ್ಯ ಮಂಜುನಾಥ್,  ಉಪಾಧ್ಯಕ್ಷೆ ಲಲಿತಾಬಾಯಿ ರವಿ ನಾಯಕ್, ಪಕ್ಷದ ಮುಖಂಡರುಗಳಾದ ಕೋಟೆ ರಂಗನಾಥ್ , ಹೆಚ್.ಎಸ್. ಪುಟ್ಟಸ್ವಾಮಿ, ಜೇಮ್ಸ್ ಡಿಸೋಜಾ, ಪ್ರದೀಪ್, ಬಸವರಾಜ್, ಹೆಚ್.ಕೆ.ಕೇಶವಮೂರ್ತಿ, ರಾಬರ್ಟ್, ನಾರಾ ಯಣ, ಮಂಜುನಾಥ್, ಬ್ಯಾಟರಿ ಮಂಜಣ್ಣ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ