Leed Suddi

 

 

ಬಾಲಕಾರ್ಮಿಕ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ನೈತಿಕ ಹೊಣೆ. ಮಕ್ಕಳನ್ನು ಶಾಲೆಗೆ ಕಳುಹಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಹೆಗಡೆ ಹೇಳಿದರು.

ನಗರದ ಚರ್ಚ್ ರಸ್ತೆಯ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಂತ ಜೋಸೆಫರ ಕಾನ್ವೆಂಟ್‍ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ವಕೀಲರ ಸಂಘ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಆಯೋಜಿಸಲಾಗಿದ್ದ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ಕೇವಲ ಕಾಗದದ ಮೇಲಷ್ಟೇ ಉಳಿಯದೆ ಪ್ರಾಯೋಗಿಕವಾಗಿ ಅನುಷ್ಟಾನಕ್ಕೆ ಬರಬೇಕು. ನಮ್ಮ ಮಕ್ಕಳು ಕೈಗಾರಿಕೆ ಗಳಲ್ಲಿ ಅಥವಾ ಹೋಟೆಲ್‍ಗಳಲ್ಲಿ ದುಡಿಯಬೇಕೇ ಅಥವಾ ಶಾಲೆಗೆ ಹೋಗಿ ಕಲಿಯಬೇಕೇ ಎಂಬುದನ್ನು ಸಮಾಜ ಗಂಭೀರವಾಗಿ ಯೋಚಿಸಬೇಕು. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವ ಯಾವುದೇ ಪ್ರವೃತ್ತಿ ಅಕ್ಷಮ್ಯ ಅಪರಾಧ ಎಂದರು.

ಶಾಲಾ ವಿದ್ಯಾರ್ಥಿಗಳು ತಮ್ಮ ಆಸುಪಾಸಿನಲ್ಲಿ ಯಾರಾದರೂ ಶಾಲೆ ಬಿಟ್ಟು ದುಡಿಮೆಗೆ ಸೇರಿರುವುದನ್ನು ಕಂಡರೆ ತಕ್ಷಣವೇ ಶಿಕ್ಷಕರಿಗೆ, ಪೊಷಕರಿಗೆ ಅಥವಾ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಸಮಾಜದ ಕಣ್ಣುಗಳಾಗಬೇಕು. ಬಾಲಕಾರ್ಮಿಕ ಪದ್ಧತಿಯನ್ನು ತಡೆಯಲು ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳು ಪರಸ್ಪರ ಸಹಕರಿಸಿ ಜಂಟಿಯಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಕಾಫಿ ಪ್ಲಾಂಟೇಶನ್ ಹಾಗೂ ಪಟಾಕಿ ತಯಾರಿಕಾ ಉದ್ಯಮಗಳಲ್ಲಿ ಬಾಲಕಾರ್ಮಿಕರ ಬಳಕೆ ಹೆಚ್ಚಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಾಧೀಶರು, ಪಟಾಕಿ ತಯಾರಿಕೆಯಲ್ಲಿ ಅತಿ ಹೆಚ್ಚು ಮಕ್ಕಳನ್ನು ದುಡಿಸಿಕೊಳ್ಳಲಾಗುತ್ತಿದೆ ಎಂಬ ಕಾರಣಕ್ಕೆ ಇಂದು ಜಾಗತಿಕ ಮಟ್ಟದಲ್ಲಿ ಲಕ್ಷಾಂತರ ಜನ ಪಟಾಕಿ ಬಳಸುವುದನ್ನೇ ಕೈಬಿಡುತ್ತಿದ್ದಾರೆ. ಕೇವಲ ಪರಿಸರ ಮಾಲಿನ್ಯ ಮಾತ್ರವಲ್ಲದೆ, ಬಾಲ ಕಾ ರ್ಮಿಕರ ಶೋಷಣೆಯೂ ಪಟಾಕಿ ನಿಷೇಧÀದ ಹಿಂದಿರುವ ದೊಡ್ಡ ನೈತಿಕ ಕಾರಣವಾಗಿದೆ. ಕಡಿಮೆ ಕೂಲಿಗೆ ಸಿಗುತ್ತಾರೆ ಎಂಬ ಕಾರಣಕ್ಕೆ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹನುಮಂತಪ್ಪ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯು ಸಮಾಜಕ್ಕೆ ಅಂಟಿದ ಶಾಪವಾಗಿದ್ದು, ಪ್ರತಿಯೊಂದು ಮಗುವೂ ಕಡ್ಡಾಯವಾಗಿ ಶಿಕ್ಷಣ ಪಡೆಯುವ ಮೂಲಕ ಶಾಲೆಯಲ್ಲಿ ಇರಬೇಕು ಎಂದು ತಿಳಿಸಿದರು.

ಸಂವಿಧಾನದ ಆರ್ಟಿಕಲ್ 21ರ ಪ್ರಕಾರ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯ ಶಿಕ್ಷಣದ ಹಕ್ಕಿದೆ. ಮಕ್ಕಳು ಶಾಲೆಯಲ್ಲಿರಬೇಕು ಇಲ್ಲವೇ ಮನೆಯಲ್ಲಿರಬೇಕು. ಇದನ್ನು ಹೊರತುಪಡಿಸಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಅಥವಾ ಕೆಲಸಗಳಿಗೆ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಪೆÇಕ್ಸೋ ಕಾಯ್ದೆಯಡಿ ಇಂತಹ ಪ್ರಕರಣಗಳು ದಾಖಲಾಗುತ್ತಿದ್ದು, ಇದನ್ನು ತಡೆಯಲು ಪೆÇಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ನೇತೃತ್ವದಲ್ಲಿ ‘ಸ್ಪೆಷಲ್ ಟಾಸ್ಕ್ ಪೊರ್ಸ್’ ರಚಿಸಿ ನಿರಂತರ ನಿಗಾ ಇಡಲಾಗುತ್ತಿದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಸಿ.ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮತ್ತು ಇತರ ಇಲಾಖೆಗಳ ಜಂಟಿ ಆಶ್ರಯದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರ ನಿರ್ಮೂ ಲನೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 2,053 ಜಂಟಿ ತಪಾಸಣೆಗಳನ್ನು ನಡೆಸಲಾಗಿದ್ದು, ಈ ವೇಳೆ ಒಟ್ಟು 24 ಪ್ರಕರಣಗಳು ದಾಖಲಾಗಿವೆ. ಈ ಕಾರ್ಯಾಚರಣೆಗಳ ಮೂಲಕ 29 ಬಾಲ ಮತ್ತು ಕಿಶೋರ ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ನಿಯಮ ಉಲ್ಲಂಘಿಸಿದ 11 ಪ್ರಕರಣಗಳಲ್ಲಿ ನ್ಯಾಯಾಲಯವು ದಂಡ ವಿಧಿಸಿದ್ದು, ಒಟ್ಟು 1,01,500 ದಂಡದ ಮೊತ್ತವನ್ನು ಜಿಲ್ಲೆಯಲ್ಲಿ ವಸೂಲಿ ಮಾಡಲಾಗಿದೆ.

ಅಂಭೇಡ್ಕರ್ ಕಾರ್ಮಿಕರ ಸಹಾಯಹಸ್ತ ಯೋಜನೆಯಡಿ ನೊಂದಾಯಿತರಾಗಿರುವ ಪತ್ರಿಕ ವಿತರಣಾ ಹಾಗೂ ನ್ಯೂಸ್ ಪೇ ಪರ್ ಕಾರ್ಮಿಕರ ಸಂಖ್ಯೆ 140 ಇದ್ದು, ಪತ್ರಿಕಾ ವಿತರಣಾ ಕಾರ್ಮಿಕರು ಇ-ಶ್ರಮ್ ಪೋರ್ಟಲ್‍ನಲ್ಲಿ ಪ್ರಥಮವಾಗಿ ಆನ್‍ಲೈನ್ ಮೂಲಕ ಸ್ವ ಇಚ್ಚೆಯಿಂದ ನೋಂದಣಿ ಮಾಡಿಕೊಳ್ಳಬೇಕು. ಈ ಯೋಜನೆಯಡಿ ಅವರಿಗೆ ಅಪಘಾತದಲ್ಲಿ ಮರಣ ಹೊಂದಿದ್ದಲ್ಲಿ 2 ಲಕ್ಷ, ಅಪಘಾತ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ 2 ಲಕ್ಷ ಪರಿಹಾರ, ಅಪಘಾತ ಹಾಗೂ ಮಾರಣಾಂತಿಕ ಕಾಯಿಲೆ, ಗಂಭೀರ ಅನಾ ರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ಮರುಪಾವತಿ ವೆಚ್ಚ 1 ಲಕ್ಷ ದವರೆಗೆ ನೊಂದಾಯಿತ ಫಲಾನುಭವಿಗಳು ವಯೋಸಹಜ ಕಾಯಿಲೆ, ಅರೆಕಾ ಲಿಕ ಇನ್ನಿತರೆ ಕಾರಣಗಳಿಂದ ಮರಣ ಹೊಂದಿದ್ದಲ್ಲಿ ಫಲಾನುಭವಿ ಕುಟುಂಬದವರಿಗೆ ಅಂತ್ಯಕ್ರಿಯೆ 10 ಸಾವಿರ ರೂ. ಧನಸಹಾಯ ನೀಡಲಾಗುತ್ತದೆ ಎಂದು ತಿಳಿಸಿದರು.

ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ಧ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೋಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಹಾಯಕ ಕಾರ್ಮಿಕ ಆಯುಕ್ತ ಸುಭಾಶ್ ಎಂ.ಆಲದಕಟ್ಟಿ ಇವರನ್ನು ಸ್ವಾಗತಿಸಿದರು.  ಸಂತ ಜೋಸೆಫರ ಕಾನ್ವೆಂಟ್‍ನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಟಿ.ಜಯಕುಮಾರ್, ವಕೀಲರ ಸಂಘದ ಅಧ್ಯಕ್ಷ ಡಿ.ಬಿ. ಸುಜೇಂದ್ರ, ಜಿ.ಪಂ. ಕಾರ್ಯದರ್ಶಿ ಹೆಚ್.ಎಲ್.ಸುಜಾತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಬಿ.ಹೆಚ್. ಕೃಷ್ಣಪ್ಪ, ವಿಕಸನ ಸಂಸ್ಥೆ ಅಧ್ಯಕ್ಷ ಎ.ಎಂ.ವರ್ಗೀಸ್ ಕ್ಲೀಟಸ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯಶೀಲ ಕೆ.ಆರ್. ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ