suddi-3 (1)

 

 

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಅತ್ಯಂತ ಪ್ರಮುಖ ರಸ್ತೆಯಾದ ಚಾರ್ಮಾಡಿ ಘಾಟಿಯಲ್ಲಿ ಕಲ್ಲುಗಳು ಜರಿಯಲಾರಂಭಿಸಿದ್ದು, ಮುಂಗಾರು ಮಳೆಯ ಆರಂಭದಲ್ಲೇ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಸಮೀಪವಿರುವ ಎತ್ತರದ ಗುಡ್ಡದಿಂದ ರಸ್ತೆ ಪಕ್ಕಕ್ಕೆ ಸಣ್ಣ ಪ್ರಮಾಣದಲ್ಲಿ ಕಲ್ಲುಗಳು ಕುಸಿದು ಬಿದ್ದಿವೆ. ಕಳೆದ ಒಂದು ತಿಂಗಳಿನಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮುಂಗಾರು ಪೂರ್ವ ಮಳೆ ಸುರಿದಿದ್ದರಿಂದ, ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಲ್ಲುಗಳು ಜರಿದ ಸಮಯದಲ್ಲಿ ಯಾವುದೇ ವಾಹನಗಳು ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದ್ದು, ಸದ್ಯ ವಾಹನ ಸಂಚಾರ ಎಂದಿನಂತೆ ಮುಂದುವರಿದಿದೆ.

ಈಗಷ್ಟೇ ಮುಂಗಾರು ಮಳೆಗಾಲ ಶುರುವಾಗಿದ್ದು, ಮುಂದಿನ ಮೂರು ತಿಂಗಳುಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಚಾರ್ಮಾಡಿ ಘಾಟ್ ಒಳಗೊಂಡಂತೆ ಮಲೆನಾಡಿನ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಆತಂಕ ದಟ್ಟವಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ