huthatma

 

 

ಅಸ್ಸಾಂನ   ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ   ಭಾರತೀಯ ವಾಯುಪಡೆಯ (IAF) ಎಎನ್ -32 ಸಾರಿಗೆ ವಿಮಾನ ಪತನವಾಗಿದ್ದು (AN-32 Transport Aircraft), ಐವರು ವಾಯುಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸಹ ಪೈಲಟ್‌ ಗಾಯಗೊಂಡಿದ್ದಾರೆ.

ಸ್ಕ್ವಾಡ್ರನ್ ಲೀಡರ್ ಪ್ರಶಾಂತ್ ಸಿಂಗ್, ಫ್ಲೈಟ್ ಲೆಫ್ಟಿನೆಂಟ್ ಶುಭಮ್ ಕುಮಾರ್, ಸಾರ್ಜೆಂಟ್ ಜಿತೇಂದ್ರ ಶರ್ಮಾ, ಅಗ್ನಿವೀರ್ವಾಯು ಖೇಮರಾಮ್ ಕುಮಾವತ್ ಮತ್ತು ಅಗ್ನಿವೀರ್ವಾಯು ಡ್ಯಾನಿಶ್ ಆಲಂ ಮೃತರು ಎಂದು ಗುರುತಿಸಲಾಗಿದೆ. ಭಾರತೀಯ ವಾಯುಪಡೆ ಮೃತರಿಗೆ   ಸಂತಾಪ ಸೂಚಿಸಿದೆ.

ಜೋರ್ಹತ್ ಜಿಲ್ಲೆಯ ರೌರಿಯಾ ಪ್ರದೇಶದಲ್ಲಿರುವ ಭಾರತೀಯ ವಾಯುಪಡೆಯ ವಾಯುನೆಲೆಯಲ್ಲಿ ಇಳಿಯುವಾಗ ಇಂದು ಮಧ್ಯಾಹ್ನ ಎಎನ್ -32 ವಿಮಾನ ಪತನಗೊಂಡಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಐಎಎಫ್‌ ಘಟನೆಯನ್ನು ಖಚಿತಪಡಿಸಿದ್ದು, ಸಂಪೂರ್ಣ ಪರಿಶೀಲನೆ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ