suddi-6 (3)

 

 

ಬಹು ನಿರೀಕ್ಷೆಯ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿ ಪ್ರಾರಂಭಿಸಲು ಸರ್ಕಾರದಿಂದ 11 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್ ತಿಳಿಸಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟಗಾರರಲ್ಲಿ ಒಬ್ಬರಾದ ಮಳಲೂರು ಜವರೇಗೌಡ ಅವರ ಕನಸಿನ ಕೂಸು ಮಳಲೂರು ಏತ ನೀರಾವರಿ ಯೋಜನೆ. 1987 ರಲ್ಲಿ ಮಳಲೂರು ಭಾಗದ ರೈತರನ್ನು ಹುರಿದುಂಬಿಸಿ ಚಳುವಳಿ ಕಟ್ಟದಿದ್ದರೆ ಇಂದು ಮಳಲೂರು ಏತ ನೀರಾವರಿ ಯೋಜನೆ ಈ ಹಂತ ತಲುಪುತ್ತಿರಲಿಲ್ಲ ಎಂದು ಹೇಳಿದರು.

ಮಳಲೂರು ಏತ ನೀರಾವರಿ ಯೋಜನೆಗೆ ಸರ್ಕಾರದಿಂದ ಹಣ ಬಿಡುಗಡೆಯಾಗಿ ಕಾಮಗಾರಿ ಪ್ರಾರಂಭಿಸಲು ಮತ್ತು ಬಾಣಾವರ ಮತ್ತು ಗಂಜಲಗೋಡು ಸೇತುವೆ ಕಾಮಗಾರಿಗೆ ಹಣ ಬಿಡುಗಡೆಗೊಳಿಸಲು ಶ್ರಮ ವಹಿಸಿದ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮಳಲೂರು ಏತ ನೀರಾವರಿ ಯೋಜನೆ ವ್ಯಾಪ್ತಿಯ ರೈತರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಮಳಲೂರು ಏತ ನೀರಾವರಿ ಯೋಜನೆ ಮೂಲಕ ರೈತರಿ ಜಮೀನಿಗೆ ಹರಿಸುವ ಈ ಯೋಜನೆಗೆ 1998 ರಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತು 2000 ರಲ್ಲಿ ಶಂಕುಸ್ಥಾಪನೆಗೊಂಡು ಕಾಮಗಾರಿ ಕುಂಟುತ್ತಾ ಸಾಗಿದ್ದ ಕಾಮಗಾರಿಗೆ ಕ್ಷೇತ್ರದ ಮಾಜಿ ಶಾಸಕ ಸಗೀರ್ ಅಹಮದ್ ಅವರು 50 ಲಕ್ಷ ರೂ.ಗಳನ್ನು ಬಿಡುಗಡೆಗೊಳಿಸಿ ಕಾಮಗಾರಿ ಪ್ರಾರಂಭಿಸಲಾಯಿತು ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರು ರೈತರ ಮನವೊಲಿಸಿ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಹೆಚ್ಚುವರಿ ಹಣ ಬಿಡುಗಡೆಗೆ ಜಿಲ್ಲಾ ಸಮಿತಿ ಬಿರಂಜಿ ಹಳ್ಳದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ವಾಹನ ಜಾಥಾ ಮತ್ತು ಧರಣಿ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು. ಈ ಕಾರಣ ಮತ್ತು ಶಾಸಕರ ಪರಿಶ್ರಮದಿಂದ ಸರ್ಕಾರ 11 ಕೋಟಿ ಹಣವನ್ನು ಮಂಜೂರು ಮಾಡಿರುವುದರಿಂದ ರೈತರಿಗೆ ಪರಿಹಾರ ಕೊಡಿಸುವ ಜೊತೆಗೆ ಕಾಮಗಾರಿ ಪ್ರಾರಂಭಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಸದಾ ಬರಗಾಲಕ್ಕೆ ತುತ್ತಾಗುವ 1600 ಎಕರೆ ವ್ಯಾಪ್ತಿಯ ರೈತರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಸರ್ಕಾರ ಕೂಡಲೇ ಗಮನಹರಿಸಿ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿ ಮುಕ್ತಾಯಕ್ಕೆ ಬೇಕಾಗಬಹುದಾದ ಹಣ ಮಂಜೂರು ಮಾಡುವ ಮೂಲಕ ಮಳಲೂರು ಏತ ನೀರಾವರಿ ವ್ಯಾಪ್ತಿಯ ಹಳ್ಳಿಗಳ ರೈತರ ನೀರಾವರಿ ಆಸೆಯನ್ನು ಪೂರೈಸಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಕುಮಾರಸ್ವಾಮಿ, ಶಿವಕುಮಾರ್, ಸಂಘಟನಾ ಕಾರ್ಯದರ್ಶಿ ದೇವರಾಜ್, ತಾಲ್ಲೂಕು ಗೌರವಾಧ್ಯಕ್ಷ ಜಯರಾಮ್, ತಾಲ್ಲೂಕು ಖಜಾಂಚಿ ಕೆ.ಟಿ.ಸುನೀಲ್ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ