suddi-12 (1)

 

 

ಚಿಕ್ಕಮಗಳೂರು ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹಕ್ಕಿಪಿಕ್ಕಿ ಗ್ರಾಮಸ್ಥರಿಗೆ ನಿವೇಶನ ಮತ್ತು ಮೂಲಸೌಕರ್ಯ ಒದಗಿಸಬೇಕು ಎಂದು ಭೀಮ್‍ಆರ್ಮಿ ಹಾಗೂ ಪ್ರಗತಿಪರ ಮುಖಂ ಡರುಗಳು ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾಡಳಿತ ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು.

ಭೀಮ್‍ಆರ್ಮಿ ಜಿಲ್ಲಾಧ್ಯಕ್ಷ ಹೊನ್ನೇಶ್ ಮಾತನಾಡಿ ಹಕ್ಕಿಪಿಕ್ಕಿ ಗ್ರಾಮದ ಸರ್ವೆ ನಂ.218ರಲ್ಲಿ 2 ಎಕರೆ  ಸರ್ಕಾರಿ ಜಾಗವಿದೆ. ಈ ಸ್ಥಳದಲ್ಲಿ ಸ್ಥಳೀಯವಾಗಿ ನೂರಾರು ವರ್ಷಗಳಿಂದ ವಾಸಿಸುತ್ತಿರುವ ನಿವೇಶನ ರಹಿ ತ ಕುಟುಂಬಗಳಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಈ ಗ್ರಾಮದಲ್ಲಿ 30ಕ್ಕೂ ಹೆಚ್ಚು ಕುಟುಂಬಗಳಿಗೆ ವಾಸ ಮಾಡುವುದಕ್ಕೆ ಮನೆಗಳಿಲ್ಲ, ಸಮುದಾಯ ಭವ ನದಲ್ಲಿ ಮಲಗುವ ಸ್ಥಿತಿಯಿದೆ. ಆದ್ದರಿಂದ ಜಿಲ್ಲಾಡಳಿತ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಬುಡ ಕಟ್ಟು ಜನಾಂಗದವರೆಗೆ ನಿವೇಶನ, ಮೂಲಸೌಕರ್ಯ ಕಲ್ಪಿಸಬೇಕು ಎಂದರ.

ಎಸ್ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ್ ಮಾತನಾಡಿ ಇಲ್ಲಿನ ಬಡ ಜನರು ಕೇಳುತ್ತಿರುವುದು ಜಮೀನು ಕೊಡಿ ಎಂದಿಲ್ಲ. ವಾಸಕ್ಕೆ ಕನಿಷ್ಟ  30*40 ಅಳತೆಯ ನಿವೇಶನ ನೀಡ ಬೇಕು ಎಂದ ಅವರು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ನಿವೇಶನ ನೀಡದಿದ್ದಲ್ಲಿ ಉಗ್ರ ಹೋರಾಟ ನಡೆಸ ಲಾಗುವುದು ಎಂದು ಎಚ್ಚರಿಸಿದರು.

ಅಲೆಮಾಡಿ ಬುಡಕಟ್ಟು ಮಹಾಸಭಾ ಜಿಲ್ಲಾಧ್ಯಕ್ಷ ದಿವಾಕರ್ ಮಾತನಾಡಿ ಹಲವಾರು ವರ್ಷಗಳಿಂದ ವಾಸಿಸುತ್ತಿರುವ ಹಕ್ಕಿಪಿಕ್ಕಿ ಜನಾಂಗಕ್ಕೆ ಯಾವುದೇ ಅಧಿಕಾರಿಗಳು ದಾಖಲೆ ಮಾಡಿಕೊಡಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಜನಾಂಗದ ಜಾಗವನ್ನು ಕಬಳಿಸುವ ಸ್ಥಿತಿಯಿದ್ದು ಕೂಡಲೇ ಜಾಗವನ್ನು ಜನಾಂಗ ಕ್ಕೆ ಉಳಿಸಿಕೊಡಬೇಕು ಎಂದರು.

ಈ ಸಂದರ್ಭದಲ್ಲಿ ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ರಮೇಶ್, ಮುಖಂಡರುಗಳಾದ ಪ್ರವೀಣ್ ಗುಂಡ, ರಾಘು, ಸುಧೀರ್, ಕೀರ್ತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ