accident

 

 

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ   ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ   ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ ಬಳಿ ನಡೆದಿದೆ.

ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೋರ್ವ ಸಿಬ್ಬಂದಿ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಚಾರ್ಮಾಡಿ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ